ವಿಕಸಿತ ಭಾರತ ಗ್ಯಾರಂಟಿ ಯೋಜನೆ: 125 ದಿನಗಳ ಉದ್ಯೋಗ ಕಾರ್ಯಯೋಜನೆಗೆ ಒತ್ತು
Viksit Bharat Guarantee Scheme: Focus on 125-day employment plan
ಲೋಕದರ್ಶನ ವರದಿ
ಇಂಡಿ 03 : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಹಾಗೂ ಒಂದು ಮಾನವ ದಿನಕ್ಕೆ 382 ರೂಪಾಯಿ ಕೂಲಿ ಮೊತ್ತ ನೀಡಲಾಗುವುದು ಎಂದು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವಪ್ಪ ಏವೂರ ರವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ವಿಬಿ ಜಿ ರಾಮ್ ಜಿ ಯೋಜನೆ ಜು.1ರಿಂದ ಅನುಷ್ಠಾನಗೊಂಡಿದ್ದು ಸಮಗ್ರ ಡಿಜಿಟಲ್ ವ್ಯವಸ್ಥೆ ಮೂಲಕ ಆಡಳಿತ ಹೊಣೆಗಾರಿಕೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಆಧುನೀಕರಿಸುವುದು ಈ ಯೋಜನೆಯ ದೃಷ್ಟಿಕೋನವಾಗಿದೆ. ಕೃಷಿ ಕಾಲದಲ್ಲಿ ಕೃಷಿ ಕಾರ್ಮಿಕರ ಸಮರ್ಕ ಲಭ್ಯತೆಗೆ ಸುಗಮಗೊಳಿಸಲು ಯೋಜನೆಯಡಿ 60 ದಿನಗಳ ಕಾಲ ವಿರಾಮ ನೀಡುವ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಸಂಜಯ ಖಡೆಗೆಕರ್ ರವರು ಮಾತನಾಡಿ, ವಿಬಿ ಜಿ ರಾಮ್ ಜಿ ಯಶಸ್ವಿಯಾಗಿ ಅನುಷ್ಠಾನ ರೂಪುರೇಷೆ ಸಿದ್ಧಪಡಿಸಿ ಕೊಳ್ಳಲಾಗುತ್ತಿದೆ.
ಗ್ರಾಮೀಣ ಭಾಗದಲ್ಲಿ ದೀರ್ಘಾವಧಿಯ ಮೂಲಸೌಕರ್ಯಕ್ಕೆ ಸಂಬಂಧಿಸಿದ ಉದ್ಯೋಗ ಸೃಷ್ಟಿಸಲಾಗುತ್ತದೆ. ಉತ್ಪಾದಕತೆ ಸೃಷ್ಟಿಸುವ ಸ್ವತ್ತುಗಳ ನಿರ್ಮಾಣ, ಹಲವಾರು ಸರ್ಕಾರಿ ಯೋಜನೆಗಳನ್ನು ಒಗ್ಗೂಡಿಸುವುದು ಹಾಗೂ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗಿದೆ. ಯೋಜನೆಯಡಿ ತಾಲೂಕಿನ ಎಲ್ಲಾ ಅನುಷ್ಠಾನ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜತೆಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 