ಗ್ರಾಮ ಆಡಳಿತ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಹಕಾರ ಮನೋಭಾವನೆಯಿಂದ ಕಾರ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ
ಕಾರವಾರ 25: ಗ್ರಾಮ ಆಡಳಿತದ ಆಧಾರ ಸ್ಥಂಭವಾಗಿರುವ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರೊಂದಿಗೆ ಪರಸ್ಪರ ಸಹಕಾರ ಮನೋಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಗ್ರಾಮಡಳಿತ ಅಧಿಕಾರಿಗಳ ಕೇಂದ್ರ ಸಂಘ(ರಿ), ಜಿಲ್ಲಾ ಘಟಕ ಉತ್ತರ ಕನ್ನಡ ಹಾಗೂ ತಾಲೂಕು ಘಟಕಗಳ ಸಹಯೋಗದೊಂದಿಗೆ ನಡೆದ 2025 ನೇ ಸಾಲಿನ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕುಟುಂಬದತೆ ಇದ್ದು, ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ತಮ್ಮವರು ಎಂದು ಭಾವಿಸಿದಾಗ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತವೆ ಆ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಒಂದು ಕುಟುಂಬದಂತೆ ನೋಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಕೆಲಸವನ್ನು ಪ್ರಮಾಣಿಕವಾಗಿ ನಿರ್ವಹಿಸಿದರೆ ಸಾರ್ವಜನಿಕರ ಗೌರವಕ್ಕೂ ಅರ್ಹರಾಗುವುದರ ಜೊತೆಗೆ ತಮ್ಮ ಮೇಲೆ ಇರುವ ಗೌರವವು ಹೆಚ್ಚಾಗಲಿದ್ದು, ಈ ನಿಟ್ಟಿನಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೇ ಎಲ್ಲರೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.
ಸರ್ಕಾರ ನಮಗೆ ಸಾರ್ವಜನಿಕರು ಕೆಲಸ ಮಾಡಲು ಅವಕಾಶ ನೀಡಿದೆ ಅದನ್ನು ಸಮರ್ಕವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸಿ, ತಮ್ಮಗೆ ಕರ್ತವ್ಯ ನಿರ್ವಹಿಸಲು ಏನೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತಂದಲ್ಲಿ ಬಗೆಹರಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿ, ಮಾತನಾಡಿ ಮನಸ್ಸಿನ ಭಾವನೆಗಳಿಗೆ ಪರ್ಯಾಯವಾದದ್ದು ದಿನಚರಿಯಾಗಿದೆ. ದಿನಚರಿಗೆ ಅದರದೇ ಆದ ಮಹತ್ವ ಇದೆ ಪ್ರತಿನಿತ್ಯದ ಹಾವ್ಯಾಸಗಳನ್ನು ಬರೆದಿಡುವುದರಿಂದ ದೈನಂದಿನ ಚಟುವಟಿಕೆಗೆ, ಕೆಲಸಕಾರ್ಯಕ್ಕೆ ಪ್ರೇರಣೆ ನೀಡುವಂತಾಗಿದೆ ದಿನಚರಿಯಲ್ಲಿ ಗ್ರಾಮಡಳಿತದ ಸೆಕ್ಷನ್‌ಗಳನ್ನು ಒಳಗೊಂಡಿರುವುದರಿಂದ ಗ್ರಾಮಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಗ್ರಾಮ ಆಡಳಿತಾಧಿಕಾರಿಗಳು ಶ್ರದ್ದೆ, ನಿಷ್ಠೆ ಪ್ರಾಮಾಣಿಕತೆಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವ ಪ್ರವೃತ್ತಿಯನ್ನ ಬೆಳಸಿಕೊಂಡು ಸಮಸ್ಯಗಳಿಗೆ ಸೂಕ್ತವಾದ ಪರಿಹಾರವನ್ನು ಕೊಡುವಂತಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜು ಕುಮಾರ ನಾಯ್ಕ, ತಹಶೀಲ್ದಾರ ನಿಶ್ಚಲ್ ನೊರೊನ್ಹಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್ಕರ್, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಚಾಂದ ಬಾಷಾ ಮುಲ್ಲಾ, ಗ್ರಾಮಡಳಿತ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.