ಕಾಯಕ ಗ್ರಾಮ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಮಲ್ಲನಗೌಡ ಕೆ.ಎಸ್
Village development is possible through Kayaka Grama Yojana: Mallanagowda KS
ಕಂಪ್ಲಿ 07: ಕಾಯಕ ಯೋಜನೆಯಿಂದ ಗ್ರಾಮಗಳಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸುವ ಗುರಿಯೊಂದಿಗೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಾಪಂ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್ ಹೇಳಿದರು.
ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಕಛೇರಿ ಆವರಣದಲ್ಲಿ ತಾಪಂ, ಗ್ರಾಪಂ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಯಕ ಗ್ರಾಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಯಕ ಗ್ರಾಮ ಪಂಚಾಯಿತಿಗಳನ್ನು ದತ್ತುಪಡೆದು, ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಯೋಜನೆಗಳ ಮುಖ್ಯ ಉದ್ದೇಶವಾಗಿದೆ. ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ. 15ನೇ ಹಣಕಾಸು, ಸ್ಥಳೀಯ ಸಂಸ್ಥೆಯ ನಿಧಿ, ನರೇಗಾ ಅನುದಾನಗಳನ್ನು ಸಮರ್ಕವಾಗಿ ಬಳಸಿಕೊಂಡುಮ ಪಂಚಾಯಿತಿಯನ್ನು ಅಭಿವೃದ್ಧಿಪಡಿಸಬೇಕು. ಗ್ರಾಮಗಳಲ್ಲಿ ನೈರ್ಮಲ್ಯ, ಬೀದಿ ದೀಪ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಕಂಪ್ಲಿ ತಾಲೂಕಿನಲ್ಲಿ ನಂ.10 ಮುದ್ದಾಪುರ, ಹಂಪಾದೇವನಹಳ್ಳಿ, ದೇವಸಮುದ್ರ, ದೇವಲಾಪುರ, ಮೆಟ್ರಿ ಗ್ರಾಮ ಪಂಚಾಯಿತಿಗಳು ಕಾಯಕ ಗ್ರಾಮ ಯೋಜನೆಗೆ ಒಳಪಟ್ಟಿದ್ದು, ಈ ಗ್ರಾಮಗಳನ್ನು ದತ್ತು ಪಡೆದು, ಅಭಿವೃದ್ಧಿಪಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಪಿಡಿಒ ಶಿಲ್ಪರಾಣಿ ಮಾತನಾಡಿ, ಕಾಯಕ ಗ್ರಾಮದೊಂದಿಗೆ ಗ್ರಾಪಂ ಮಟ್ಟದಲ್ಲಿ ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಮೂಲಕ ಪ್ರತಿಯೊಂದು ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಸೋಮೇಶ್ವರಿ ಪರಶುರಾಮ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಡೆ ಸಾವಿತ್ರಮ್ಮ ಮಹಾದೇವಪ್ಪ, ಸದಸ್ಯರಾದ ಡಿ.ರಾಮಯ್ಯ, ಗೌರಮ್ಮ, ಓರಾ್ವಯಿ ಮಹಾದೇವಪ್ಪ, ರೇಣುಕಮ್ಮ, ವನಜಾಕ್ಷಿ, ಎಡಿಪಿಆರ್ ಶ್ರೀಶೈಲಗೌಡ, ಕೃಷಿ ಇಲಾಖೆಯ ಸಕಿ, ರೀಡ್ಸ್ ಸಂಸ್ಥೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 