ವಿ.ಸ.ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ವಿನಯಕುಮಾರ ಪಾಟೀಲ ಆಯ್ಕೆ
ದೇವರಹಿಪ್ಪರಗಿ, 10; ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ದೇವರಹಿಪ್ಪರಗಿ ವಿಧಾನಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ವಿನಯಕುಮಾರ ಪಾಟೀಲ ಸಾತಿಹಾಳ ಆಯ್ಕೆ ಆಗಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಯುವ ಮುಖಂಡರಾಗಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ ಯಾಳಗಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆನಂದಗೌಡ.ಭೀ.ದೊಡ್ಡಮನಿ, ಕಾಂಗ್ರೆಸ್ ಮುಖಂಡರಾದ ಅಣ್ಣುಗೌಡ ಪಾಟೀಲ ದಿಂಡವಾರ, ರವಿಕುಮಾರ ಹಯ್ಯಾಳ, ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಸಂತೋಷ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಆನ್ಲೈನ್ ಮುಖಾಂತರ ನಡೆದ ಚುನಾವಣೆಯಲ್ಲಿ ದೇವರಹಿಪ್ಪರಗಿ ವಿಧಾನಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಗೆಲುವು ಸಾಧಿಸಿದ್ದಾರೆ.
ಆಯ್ಕೆಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ರಾಜ್ಯ, ಜಿಲ್ಲಾ ಹಾಗೂ ತಾಲೂಕ ಮುಖಂಡರಿಗೆ ಪತ್ರಿಕೆಯ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ