ವಿರಾಟ್ ಕೊಹ್ಲಿ, ಮೀರಾಬಾಯಿ ಚಾನುಗೆ ರಾಷ್ಟ್ರಪತಿಯಿಂದ 'ಖೇಲ್ ರತ್ನ' ಪ್ರದಾನ
ನವದೆಹಲಿ 25: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೇಟ್ಲಿಫ್ಟರ್ ಮೀರಾಬಾಯ್ ಚಾನು ಅವರು ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾದ ರಾಜಿವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿಯನ್ನು ಸ್ವೀಕರಿಸಿದರು.
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಮನಾಥ್ ಕೋವಿಂದ್ ಅವರು ವಿರಾಟ್ ಕೊಹ್ಲಿ ಹಾಗೂ ಮೀರಾಬಾಯಿ ಚಾನು ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ವಿರಾಟ್ ಕೊಹ್ಲಿ ಜೊತೆ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶಮರ್ಾ ಕೂಡ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಕಾಮನ್ ವೆಲ್ಸ್, ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾ, ಓಟಗಾತರ್ಿ ಹಿಮಾ ದಾಸ್, ಮಹಿಳಾ ಕ್ರಿಕೆಟ್ ಆಟಗಾತರ್ಿ ಸ್ಮೃತಿ ಮಂದಾನ, ಕನ್ನಡಿಗ ಟೆನಿಸ್ ಪಟು ರೋಹನ್ ಬೋಪಣ್ಣ ಸೇರಿದಂತೆ 20 ಕ್ರೀಡಾಪಟುಗಳು ಅಜರ್ುನ್ ಪ್ರಶಸ್ತಿ ಸ್ವೀಕರಿಸಿದರು.
ಬಾಕ್ಸಿಂಗ್ ಕೋಚ್ ಕನ್ನಡಿಗ ಚೆನಂದ ಅಚ್ಚಯ್ಯ ಕುಟ್ಟಪ್ಪ, ವೇಟ್ಲಿಫ್ಟರ್ ಕೋಚ್ ವಿಜಯ್ ಶಮರ್ಾ ಸೇರಿದಂತೆ 8 ಮಾರ್ಗದರ್ಶಕರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಎಲ್ಲರಿಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 