ಲೋಕದರ್ಶನ ವರದಿ
ಬ್ಯಾಡಗಿ03: ತಾಲೂಕಿನ ಅನೇಕ ಗ್ರಾಮಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಶಾಲಾ ಕಟ್ಟಡಗಳನ್ನು ನಿಮರ್ಿಸಲಾಗುತ್ತಿದ್ದು, ಜನತೆ ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಅವರು ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ವತಿಯಿಂದ 10 ಲಕ್ಷ ರೂ.ಗಳ ವೆಚ್ಚದಲ್ಲಿ ನಿಮರ್ಿಸಲಾಗುತ್ತಿರುವ ಕಾಲುವೆ ನಿಮರ್ಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃಧ್ದಿಗಾಗಿ ಕೊಟ್ಯಾಂತರ ರೂ.ಗಳ ಅನುದಾನವನ್ನು ಒದಗಿಸುವ ಮೂಲಕ ಸಮರ್ಪಕ ರಸ್ತೆ ಸಂಚಾರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ಜನಪರ ಕಾರ್ಯಗಳನ್ನು ನಡೆಸುವ ಮೂಲಕ ಸಮಗ್ರ ಅಭಿವೃಧ್ಧಿಗೆ ಪ್ರಾಧಾನ್ಯತೆ ನೀಡುತ್ತಿದ್ದು, ಮುಖ್ಯಮಂತ್ರಿಗಳು ಸಹ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಲಿದ್ದಾರೆಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಪಟ್ಟಣಶೆಟ್ಟಿ ಮಾತನಾಡಿ ಶಾಸಕರು ಚುನಾವಣಾ ಪೂರ್ವದಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದು, ಕ್ಷೇತ್ರದ ಸವರ್ಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಈ ಹಿಂದಿನ ಸರಕಾರಗಳು ಮಾಡದೇ ಇರುವಂತ ಕಾಮಗಾರಿಗಳನ್ನು ಶಾಸಕರು ಮಾಡುತ್ತಿದ್ದಾರಲ್ಲದೇ ಜಿಲ್ಲೆಯಲ್ಲಿಯೇ ಬ್ಯಾಡಗಿ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಗುರಿ ಹೊಂದಿದ್ದಾರೆಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಹಬೂಬಸಾಬ ನಧಾಪ, ಬಿಜೆಪಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಸುರೇಶ ಯತ್ನಳ್ಳಿ, ಶೇಖರಗೌಡ ಗೌಡ್ರ, ಸುರೇಶ ಅಸಾದಿ, ಸಹಾಯಕ ಇಂಜನೀಯರ ಕೆ.ರಾಜಣ್ಣ, ಪಿಡಿಓ ಲತಾ ತಬರಡ್ಡಿ, ಮಾಲತೇಶ ದೊಡ್ಡಮನಿ, ಶಿವಪ್ಪ ಮಡಿವಾಳರ, ದ್ಯಾಮನಗೌಡ್ರ, ಟಿ.ಸಿ.ಗೌಡ್ರ, ಪುಟ್ಟನಗೌಡ್ರ ಪಾಟೀಲ ಗುತ್ತಿಗೆದಾರ ಸಂತೋಷ ದೊಡ್ಡಮನಿ ಸೇರಿದಂತೆ ಇತರರಿದ್ದರು.