ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಗದಗ 01:ಜಿಲ್ಲಾಡಳಿತ, ಜಿಲ್ಲಾ ಪಂಚಾ0ುತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ0ು ವತಿಯಿಂದ ಗದಗ ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆ ನಿಮಿತ್ತ ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಅವರು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಿಸಿದರು.
ದೇಶದ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನೆಲೆ0ುಲ್ಲಿ, ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ಸಂಸ್ಮರಣಾ ದಿನಾಚರಣೆ0ುನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ ಬೆಟಗೇರಿ ನಗರ ಸಭೆಯ ಪೌರಾಯಕ್ತ ಮಹೇಶ್ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಮಾಲಾರೆ್ಣ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.