ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Vishwakarma Amara Shilpi Jakanachari Memorial Day Celebration: Floral Tribute by District Administr

ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ  ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ 

ಕೊಪ್ಪಳ 01: ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿ ಅವರ  ಭಾವಚಿತ್ರಕ್ಕೆ ಜನವರಿ 1 ರಂದು ಪುಷ್ಪ ನಮನ ಸಲ್ಲಿಸಲಾಯಿತು. 

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ  ದಿನಾಚರಣೆಯನ್ನು  ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ  ಅವರು ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿಯವರ  ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತ್ರದ್, ವಿಶ್ವಕರ್ಮ ಸಮಾಜದ ಮುಖಂಡರಾದ ದೇವೆಂದ್ರ​‍್ಪ ಬಡಿಗೇರ, ಈಶಪ್ಪ ಬಡಿಗೇರ, ರುದ್ರ​‍್ಪ ಬಡಿಗೇರ, ದೇವಪ್ಪ ಬಡಿಗೇರ, ಕಲ್ಲಪ್ಪ ಬಡಿಗೇರ, ನಿಂಗಪ್ಪ ಬಡಿಗೇರ, ನಿಂಗಪ್ಪ ಬಡಿಗೇರ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.