ವಿವೇಕಾನಂದ ವಿದ್ಯಾ ಸಂಸ್ಥೆಯ ಸೌಹಾರ್ದ ಸಮ್ಮಿಲನ ಸಮಾರಂಭ
Vivekananda Vidya Sanstha's friendly reunion ceremony
ಬೀಳಗಿ 25 : ಬೀಳಗಿ ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದು ಗುರುತಿಸಲ್ಪಟ್ಟ ನಾಮಪಟ್ಟಿಯನ್ನು ಅಳಿಸಿ, ಶಿಕ್ಷಣದ ಮೂಲಕ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಕೀರ್ತಿ ಎಮ್.ಎನ್.ಪಾಟೀಲರಿಗೆ ಸಲ್ಲುತ್ತದೆ ಎಂದು ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಸಿಬ್ಬಂದಿ ವರ್ಗದ ಸೌಹಾರ್ದ ಸಮ್ಮಿಲನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಸಮಾಜಮುಖಿ ಚಿಂತನೆಯಿಂದ ಮತ್ತು ಶಿಕ್ಷಣಕ್ರಾಂತಿ ಸಾಸಬೇಕೆಂಬ ಸಂಕಲ್ಪದಿಂದ ದೊಡ್ಡ ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಶಿಕ್ಷಕರು ಹಾಗೂ ಸಿಬ್ಬಂದಿಯ ಸಮರೆ್ಣಯಿಂದ ವಿವೇಕಾನಂದ ವಿದ್ಯಾ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಪ್ರಶಂಸಿಸಿದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಮ್.ಎನ್.ಪಾಟೀಲ ಮಾತನಾಡಿ ತಾಲೂಕಿನ ವಿವಿಧ ಮಠಗಳ ಮಠಾಶರನ್ನು ಒಂದೇ ವೇದಿಕೆಯಲ್ಲಿ ಸೇರಿಸುವುದು ನನ್ನ ಆಶಯವಾಗಿತ್ತು. ತಾಲೂಕಿನಲ್ಲಿ ಇದೇ ಮೊದಲ ಪ್ರಯತ್ನವಾಗಿದೆ. ಸಂಸ್ಥೆಯಲ್ಲಿ 180ಕ್ಕೂ ಅಕ ಶಿಕ್ಷಕರು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಬೀಳಗಿ ತನ್ನದೆಯಾದ ಕೊಡುಗೆಯಾಗಿ ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ಅನೇಕ ಗಣ್ಯರನ್ನು ಕೊಟ್ಟಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 