ನರಗುಂದದಲ್ಲಿ ಮತದಾರ ಜಾಗೃತಿ ಅಭಿಯಾನ

ನರಗುಂದದಲ್ಲಿ ಮತದಾರ ಜಾಗೃತಿ ಅಭಿಯಾನ  Voter awareness campaign in Naragund

ನರಗುಂದ, ಜು. 3: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌.ಐ.ಆರ್‌.-2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯತ್ ನರಗುಂದ, ತಾಲೂಕು ಆಡಳಿತ, ಪುರಸಭೆ ನರಗುಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ನರಗುಂದ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿದರು.ನಗರದ ಉಡುಚಾ ಪರಮೇಶ್ವರಿ ದೇವಸ್ಥಾನದಿಂದ ಆರಂಭವಾದ ಬೈಕ್ ರ್ಯಾಲಿಯು ದಂಡಾಪೂರ ರಸ್ತೆ, ಮುಖ್ಯ ಮಾರುಕಟ್ಟೆ ರಸ್ತೆ, ಗಾಂಧಿ ಚೌಕ್ ಹಾಗೂ ಬಸವೇಶ್ವರ ಸರ್ಕಲ್ ಮೂಲಕ ಸಂಚರಿಸಿ,   ರಾಷ್ಟ್ರೀಯ ಹೆದ್ದಾರಿಯ ಶಿವಾಜಿ ಸರ್ಕಲ್ನಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಈ ವೇಳೆ ಮಾತನಾಡಿದ ತಾಲೂಕು ಪಂಚಾಯತ್ ನರಗುಂದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್‌.ಒ.) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಬಿ.ಎಲ್‌.ಒ.ಗಳು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.