ಸೋಮಲಾಪುರದಲ್ಲಿ ಪ್ರಶಸ್ತಿ ವಿಜೇತ ಕಲಾವಿದೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಅರ್ಜಿ ವಿತರಣೆ
Voter list revision application distributed to award-winning artist in Somalapura.
ಲೋಕದರ್ಶನ ವರದಿ
ಕಂಪ್ಲಿ, ಜು. 4: ತಾಲೂಕಿನಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಇದರ ಭಾಗವಾಗಿ ದೇವಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮಲಾಪುರ ಗ್ರಾಮದಲ್ಲಿ ವಾಸವಾಗಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬುರ್ರಕಥೆ ಕಲಾವಿದೆ ಅಶ್ವಪೆದ್ದ ರಾಮಕ್ಕ ಅವರ ನಿವಾಸಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ, ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ, ಗ್ರಾಮಸ್ಥರಲ್ಲಿ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.
ದೇವಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಮಾತನಾಡಿ, ಅರ್ಹ ಮತದಾರರು ಸುಳ್ಳು ಮಾಹಿತಿಗಳಿಗೆ ಕಿವಿಗೊಡದೆ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರೆ್ಡ, ತಿದ್ದುಪಡಿ ಅಥವಾ ಸ್ಥಳಾಂತರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಒಂದು ತಿಂಗಳ ಕಾಲ ನಡೆಯಲಿರುವ ಈ ವಿಶೇಷ ಅಭಿಯಾನ ಬಳಿಕ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಪಟ್ಟಿಯಲ್ಲಿ ಯಾವುದೇ ದೋಷಗಳು ಕಂಡುಬಂದರೆ, ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 