ಸಿಪಿಎಸ್ ಶಾಲೆಗೆ ನೀರು ಶುದ್ಧೀಕರಣ ಘಟಕ ಸ್ಥಾಪನೆ

Water purification unit installed at CPS school

ಸಿಪಿಎಸ್ ಶಾಲೆಗೆ ನೀರು ಶುದ್ಧೀಕರಣ ಘಟಕ ಸ್ಥಾಪನೆ 

ಕೊಪ್ಪಳ 27: ನಗರದ ಸಿಪಿಎಸ್ ಶಾಲೆ ಯ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಆರಓ ಪ್ಲಾಂಟ್‌ನ್ನು  2 ಲಕ್ಷ ರೂ ವೆಚ್ಚದಲ್ಲಿ ಕಿರ್ಲೋಸ್ಕರ್ ಕಾರ್ಖಾನೆ ಸಹಕಾರ ಮತ್ತು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಪ್ರಯತ್ನದಿಂದ ಶಾಲೆಯಲ್ಲಿ ಯಶಸ್ವಿಯಾಗಿ ಅಳವಡಿಸಲಾಯಿತು. 

 ಕೊಪ್ಪಳ ಜಿಲ್ಲಾ ಇನ್ನರ್ ವೀಲ್ ಕ್ಲಬ್ ಜಿಲ್ಲಾ ಚೇರ್ಮೆನ್ ಸುಷ್ಮಾಪತಂಗೆ ರವರು ಬಟನ್ ಆನ್ ಮಾಡುವುದರ ಮೂಲಕ ಚಾಲನೆ ನೀಡಿದರು, ಇದರಿಂದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವೃಂದಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಬಳಕೆ ಆಗುತ್ತಿದೆ ಇದು ಒಳ್ಳೆಯ ಬೆಳವಣಿಗೆ ಶಾಲೆಗೆ ಆರ್ ಓ ಪ್ಲಾಂಟ್ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲು ಕಾರಣಕರ್ತರಾದ ಕಿರ್ಲೋಸ್ಕರ್ ಕಾರ್ಖಾನೆಯ ಮಂಡಳಿಯವರಿಗೆ ಸುಷ್ಮಾ ಪತಂಗೆ ರವರು ಕ್ಲಬ್ ಪರವಾಗಿ ಅಭಿನಂದಿಸಿದರು. 

 ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ,ಕಾರ್ಯದರ್ಶಿ ಮೀನಾಕ್ಷಿ ಬಣ್ಣದ ಬಾವಿ, ಉಪಾಧ್ಯಕ್ಷರಾದ ಮಧು ಶೆಟ್ಟರ್, ಐ ಎಸ್ ಓ ಮಧು ನಿಲೋಗಲ್, ಖಜಾಂಚಿ ಆಶಾ ಕವಲೂರು, ಎಡಿಟರ್ ನಾಗವೇಣಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಹಾಗೂ ಸುಜಾತ ಪಟ್ಟಣಶೆಟ್ಟಿ ಸೇರಿದಂತೆ ಸದಸ್ಯರು ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಶಿಕ್ಷಕರು ಪಾಲ್ಗೊಂಡಿದ್ದರು.