ಕಿಡಗೇಡಿಗಳ ಕೃತ್ಯದಿಂದ ಅವಳಿ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ : ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ
Water supply to twin cities disrupted due to miscreants' actions: Warning of stern action
ಗದಗ 07 : ಕಿಡಗೇಡಿಗಳು ನೀರು ಸರಬರಾಜು ಪೈಪ್‌ಲೈನ್‌ಗಳಲ್ಲಿ ಕಲ್ಲು, ಬಾಟಲಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ತುಂಬಿ ನೀರು ಸರಬರಾಜು ವ್ಯವಸ್ಥೆಗೆ ಅಡ್ಡಿಪಡಿಸಿರುವ ಪರಿಣಾಮ ಅವಳಿ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.
ಪ್ರಕರಣ 1 : ನಗರದ ಭೀಷ್ಮ ಕೆರೆ ಎದುರಿನ ಬನ್ನಿಕಟ್ಟಿ ಹತ್ತಿರದಲ್ಲಿ ಕೆಲವು ದಿನಗಳ ಹಿಂದೆ ನೀರು ಪೈಪ್‌ಲೈನ್ ಮೂಲಕ ಸರಬರಾಜು ಆಗದ ಹಿನ್ನೆಲೆ ಲೈನ್ ತೆರೆಯಿಸಿ ಪರೀಶೀಲನೆ ನಡೆಸಿದಾಗ, ಕಿಡಗೇಡಿಗಳು ನೀರು ಸರಬರಾಜು ಪೈಪ್ಲೈನ್ನಲ್ಲಿ ದೊಡ್ಡ ಹಾಗೂ ಸಣ್ಣ ಗಾತ್ರದ ಕಲ್ಲುಗಳನ್ನು ತುಂಬಿರುವುದು ಪತ್ತೆಯಾಗಿದೆ. ಈ ಕೃತ್ಯ ದುರುದ್ದೇಶಪೂರ್ವಕವಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣ 2 : ಬೆಟಗೇರಿಯ ಮಂಜುನಾಥ ನಗರ ಪ್ರದೇಶದಲ್ಲಿ ಐದು ಇಂಚು ಹಾಗೂ ಎರಡು ಇಂಚು ಲೈನ್ಗಳಲ್ಲಿ ಬಾಟಲಿಗಳು ಮತ್ತು ಕಲ್ಲುಗಳು ಸಿಲುಕಿಕೊಂಡ ಪರಿಣಾಮ ನೀರು ಸರಬರಾಜು ಅಸ್ತವ್ಯಸ್ತಗೊಂಡಿದೆ. ಮುಖ್ಯ ಲೈನ್ ತೆರೆಯಿಸಿ ಪರೀಶೀಲಿಸಿದಾಗ ಅನೇಕ ಕಡೆ ಲೈನ್ಗಳು ಉದ್ದೇಶಪೂರ್ವಕವಾಗಿ ಬ್ಲಾಕ್ ಮಾಡಿರುವುದು ಕಂಡು ಬಂದಿದೆ. ಇದರಿಂದ ಹಲವಾರು ಭಾಗಗಳಿಗೆ ನೀರು ಸರಿಯಾಗಿ ತಲುಪುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ತರಹದ ಘಟನೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು. ಕಿಡಗೇಡಿಗಳ ಈ ದುಷ್ಕೃತ್ಯದಿಂದ ಸಾರ್ವಜನಿಕರಿಗೆ ನೀರು ಸರಬರಾಜು ವಿಳಂಬವಾಗಿದ್ದು, ಇದು ಅತ್ಯಂತ ಗಂಭೀರ ವಿಷಯವಾಗಿದೆ. ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುವ ಇಂತಹ ಕೃತ್ಯಗಳನ್ನು ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೀರು ಸರಬರಾಜಿಗೆ ಅಡ್ಡಿಪಡಿಸುವವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಸಹಕರಿಸಿ, ಇಂತಹ ಕಿಡಗೇಡಿಗಳ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ತಕ್ಷಣ ನಗರಸಭೆ ಅಧಿಕಾರಿಗಳಿಗೆ ಅಥವಾ ಜಿಲ್ಲಾಡಳಿತ ಕಚೇರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಸೇವೆಗೆ ಅಡ್ಡಿಯಾಗುವ ಇಂತಹ ಕೃತ್ಯಗಳನ್ನು ತಡೆಯಲು ಎಲ್ಲರ ಸಹಕಾರ ಅಗತ್ಯವಿದ್ದು, ನಗರದ ಪ್ರಜೆಗಳು ಜಾಗೃತಿಯಿಂದ ವರ್ತಿಸಿ ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 