ಧರ್ಮಗ್ರಂಥಗಳ ನಿಜಸಾರ ಅರಿಯುವಲ್ಲಿ ವಿಫಲರಾಗುತ್ತಿದ್ದೇವೆ :ಶ್ರೀನಿವಾಸ ಮಾನೆ
We are failing to understand the true essence of scriptures: Srinivas Mane
ಹಾನಗಲ್ 21 :ನಮ್ಮ ದೇಶದ ಪವಿತ್ರ ಮಣ್ಣು ಬೇಧ, ಭಾವ ಮಾಡದೇ ಎಲ್ಲರನ್ನೂ ಒಂದಾಗಿ ನೋಡಿದೆ. ಆದರೆ ಭಗವದ್ಗೀತೆ, ಕುರಾನ್, ಬೈಬಲ್ ಧರ್ಮಗ್ರಂಥಗಳ ನಿಜಸಾರ ಅರಿಯುವಲ್ಲಿ ವಿಫಲರಾಗುತ್ತಿದ್ದೇವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಹ ಒಂದಾಗಿ ಪ್ರೀತಿ, ವಿಶ್ವಾಸ, ಪರಸ್ಪರ ಸಹೋದರತೆ ಮತ್ತು ಸೌಹಾರ್ದತೆಯಿಂದ ಬದುಕುವ ಮೂಲಕ ಇಡೀ ಜಗತ್ತಿಗೆ ಉತ್ತಮ ಸಂದೇಶ ನೀಡಿರುವ ಏಕೈಕ ದೇಶ ನಮ್ಮ ಭಾರತ. ಧರ್ಮ ಗ್ರಂಥಗಳು ದ್ವೇಷ ಬೋಧಿಸಿಲ್ಲ, ಪ್ರೀತಿಯನ್ನೇ ಒತ್ತಿ ಒತ್ತಿ ಹೇಳಿವೆ. ಧರ್ಮಗಳ ಹೆಸರಿನಲ್ಲಿ ಕಚ್ಚಾಡುತ್ತಿರುವರು ಯಾರೂ ಸಹ ಧರ್ಮಗ್ರಂಥಗಳನ್ನು ಓದಿಲ್ಲ. ಓದಿದವರು ಯಾರೂ ಸಹ ಕಚ್ಚಾಡುತ್ತಿಲ್ಲ. ಸಣ್ಣಪುಟ್ಟ ಸಂಗತಿಗಳನ್ನು ಮುಂದಿಟ್ಟುಕೊಂಡು ದ್ವೇಷ ಸಾಧಿಸುತ್ತಾ ಹೋದರೆ ಅದರ ದುಷ್ಪರಿಣಾಮವನ್ನು ಮುಂದಿನ ಪೀಳಿಗೆ ಎದುರಿಸಬೇಕಾಗುತ್ತದೆ. ಪ್ರೀತಿಯಿಂದ ಎಲ್ಲರೂ ಜೊತೆಗೂಡಿ ಮುಂದೆ ಹೋದರೆ ಮಾತ್ರ ಭವಿಷ್ಯದಲ್ಲಿ ಸುಂದರ ದಿನಗಳನ್ನು ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ದೃಢಸಂಕಲ್ಪ ಮಾಡಬೇಕಿದೆ. ವಿದ್ಯಾರ್ಥಿ ದೆಸೆಯಿಂದಲೇ ಇಂಥ ಚಿಂತನೆ ನಡೆಯಬೇಕಿದೆ ಎಂದರು.
ಅಂಜುಮನ್ ಅಧ್ಯಕ್ಷ ನಜೀರ್‌ಅಹ್ಮದ್ ಸವಣೂರ ಮಾತನಾಡಿ, ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ. ಏಕಪೋಷಕ ವಿದ್ಯಾರ್ಥಿಗಳಿಗೆ ಅರ್ಧ ಪ್ರವೇಶ ಹಣ, ಪೋಷಕರಿಲ್ಲದ ವಿದ್ಯಾರ್ಥಿಗಳಿಗೆ ಪ್ರವೇಶ ಹಣ ಪಡೆಯದೇ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಂಸ್ಥೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸುಶಿಕ್ಷಿತ ಸಮಾಜ ನಿರ್ಮಾಣದ ಉದ್ದೇಶದಿಂದ ಸಂಸ್ಥೆಯನ್ನು ಮುನ್ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮೌಲಾನಾ ಖಲೀಲ್‌ಅಹ್ಮದ್ ಮಿಸ್ಸಾಯಿ, ಮೌಲಾನಾ ಮೆಹಬೂಬಿ ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ನಿಸಾರ್ ಖಾಜಿ, ನಿಸಾರ್ ಗೌಂಡಿ, ಮೊಯಿನ್ ಪೀರಾ, ಮುನೀರ್ ಪಾಳಾ, ಖುರ್ಷಿದ್ ಹುಲ್ಲತ್ತಿ, ನಿಸಾರ್ ಪಾನವಾಲೆ, ಇಫ್ರಾನ್ ಸೌದಾಗರ, ಇಫ್ರಾನ್ ಮಿಠಾಯಿಗಾರ, ಖಾಲಿದ್ ಶೇಷಗಿರಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 