ಎಲ್ಲರೂ ಒಗ್ಗೂಡಿ ಸರ್ಕಾರದ ಕಾರ್ಯಕ್ರಮ ಜಾರಿಗೊಳಿಸುತ್ತೇವೆ: ಸಚಿವ ಬಸವರಾಜ ರಾಯರಡ್ಡಿ
We will all work together to implement the government's program: Minister Basavaraj Rayareddy
ಕೊಪ್ಪಳ, ಆ.6: ಜಿಲ್ಲೆಯಲ್ಲಿ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲಾ ಹಿರಿಯ-ಕಿರಿಯ ಮುಖಂಡರು ಪರಸ್ಪರ ಸಹಕಾರದಿಂದ ಒಗ್ಗೂಡಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸಚಿವ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಗುರುವಾರ ಕೊಪ್ಪಳದ ನೀರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರು ತಮ್ಮ ಮೇಲೆ ಅಪಾರ ನೀರೀಕ್ಷೆ ಇಟ್ಟಿದ್ದು, ಅದಕ್ಕೆ ತಕ್ಕಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ ಎಂದು ತಿಳಿಸಿದರು.
ಹೊಸದಾಗಿ ಸಚಿವ ಸಂಪುಟಕ್ಕೆ ಸೇರೆ್ಡಯಾದ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಸೋಮವಾರದಿಂದ ಎಲ್ಲ ಸಚಿವರು ತಮ್ಮ ಕಚೇರಿಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ಸಿಗಲಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 