ಪಶ್ಚಿಮ ಪದವೀದರರ ಮತಕ್ಷೇತ್ರ: ಅಂತಿಮ ಮತದಾರರ ಪಟ್ಟಿ ಪ್ರಕಟ

ಪಶ್ಚಿಮ ಪದವೀದರರ ಮತಕ್ಷೇತ್ರ: ಅಂತಿಮ ಮತದಾರರ ಪಟ್ಟಿ ಪ್ರಕಟ West Graduate Constituency: Final Voter List Published


ಬೆಳಗಾವಿ, ಜ.02 : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ, 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪಧವೀದರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ದಿನಾಂಕ: 25.11.2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. 

ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 25.11.2025 ರಿಂದ ದಿ: 10.12.2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರೀಶೀಲನೆಯ ನಂತರ, ಪಶ್ಚಿಮ ಪಧವೀದರರ ಮತ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 30.12.2025 ರಂದು ಪ್ರಕಟಿಸಲಾಗಿದೆ. 

ಅಂತಿಮ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಬೆಳಗಾವಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಧಾರವಾಡ ಜಿಲ್ಲಾಧಿಕಾರಿಗಳು, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ ಇವರ ಕಚೇರಿಯಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ. 

ಅದೇ ರೀತಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ ತಿತಿತಿ.ಛಿಜಠಚಿಡಿಟಿಚಿಣಚಿಞಚಿ.ಞಚಿಡಿ.ಟಿಛಿ.ಟಿ ವೆಬ್ ಸೈಟನಲ್ಲಿ ಹಾಗೂ ಈ ಕಾರ್ಯಾಲಯದ ವೆಬ್ ಸೈಟ್ ಣಣಠಿ://ಡಿಛಿಛಜಟಚಿರಚಿತ.ಞಚಿಡಿಟಿಚಿಣಚಿಞಚಿ.ರಠ.ಟಿ ನಲ್ಲಿಯೂ ಕೂಡಾ ಲಭ್ಯವಿರುತ್ತದೆ. ಪಶ್ಚಿಮ ಪಧವೀದರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 51,599 ಪುರುಷ ಮತದಾರರು ಮತ್ತು 36,488 ಮಹಿಳಾ ಮತದಾರರು ಸೇರಿದಂತೆ ಒಟ್ಟು 88,087  ಮತದಾರರು ಇರುತ್ತಾರೆ. 

ಅಂತಿಮ ಮತದಾರರ ಪಟ್ಟಿಯಲ್ಲಿ ತಪ್ಪಿಹೋದ ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರೆ​‍್ಡ ಮಾಡಲು ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕಕ್ಕೆ 10 ದಿನಗಳ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಮತದಾರರ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯುವುದು ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಹಾಗೂ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು, ಮತದಾರರ ನೋಂದಣಾಧಿಕಾರಿಗಳಾದ ಕೆ. ಎಮ್‌. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.