ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು
ಹೂವಿನಹಡಗಲಿ 01: ತಾಲ್ಲೂಕಿನ ಕುರುವತ್ತಿಯಲ್ಲಿ ಮನೆಯ ಮೇಲೆ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಮಂಗಳವಾರ ಮಹಿಳೆ ಮೃತಪಟ್ಟಿದ್ದಾರೆ.ವೀಣಾ ಆಗಸರ (38) ಮೃತರು. ಅವರ ಮನೆಯ ಮೇಲೆ ವಿದ್ಯುತ್ 305 ಹಾದು ಹೋಗಿದೆ. ಎ. ವೀಣಾ ಮಹಿಳೆ ಸಿಂಟೆಕ್ಸ್ ಸ್ವಚ್ಛಗೊಳಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ.
ಆಕಸ್ಮಿಕವಾಗಿಜೆಸ್ಕಾಂ ವಿರುದ್ಧ ಆಕ್ರೋಶ: ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ಸ್ಥಳಾಂತರಿಸುವಂತೆ ಜೆಸ್ಕಾಂ ಅಧಿಕಾರಿಗಳು ಗ್ರಾಮ ಪಂಚಾಯಿತಿಯವರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಹಾನಿ ಸಂಭವಿಸಿದೆ ಎಂದು ಮಹಿಳೆಯ ಕುಟುಂಬದವರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಪತ್ನಿಯ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪರಮೇಶ್ವರ್ಪ ದೂರು ನೀಡಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.