ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡನ 84ನೇ ಶಾಖೆ ಉದ್ಘಾಟನೆ
Women's Home Employment Lizzat Papadana 84th Branch Inauguration
ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡನ 84ನೇ ಶಾಖೆ ಉದ್ಘಾಟನೆ
ಗದಗ 12: ಮಹಿಳೆಯರೇ ಸ್ಥಾಪಿಸಿದ ಗೃಹೋದ್ಯಮ ಲಿಜ್ಜತ್ ಪಾಪಡ್‌ದಿಂದ ಮಹಿಳೆಯರ ಸಬಲೀಕರಣದಲ್ಲಿ ಎಲ್ಲರಿಗಿಂತಲೂ ಒಂದು ಹೆಜ್ಜೆ ಮುಂದಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದ ಗುಜ್ಜರ ಬಸ್ತಿಯ ಕೆಡಿಓ ಜೈನ್ ಹಾಲ್‌ನಲ್ಲಿ ಬುಧವಾರ ಖಾದಿ ಮತ್ತು ಗ್ರಾಮ ಕೈಗಾರಿಕಾ ಆಯೋಗದಿಂದ ಗುರುತಿಸಲ್ಪಟ್ಟಿರುವ ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡನ 84ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಲಿಜ್ಜತ್ ಅನ್ನು ಶುರು ಮಾಡಿದ್ದು ಮುಂಬೈನ ಏಳು ಗುಜರಾತಿ ಮಹಿಳೆಯರು. ಅಡುಗೆ ಬಗ್ಗೆ ಆಸಕ್ತಿ ಹೊಂದಿದ್ದ ಒಂದಿಷ್ಟು ಗೃಹಿಣಿಯರ ಸ್ವಾವಲಂಬಿ ಜೀವನ ನಡೆಸುವ ಹಂಬಲದ ಪರಿಣಾಮವಾಗಿ ರೂಪುಗೊಂಡಿದ್ದು ಈ ಲಿಜ್ಜತ್ ಪಾಪಡ್. ಕೇವಲ 80 ರೂಪಾಯಿಂದ ಪ್ರಾರಂಭವಾದ ಈ ಹಪ್ಪಳದ ಉದ್ಯಮ ಇಂದು ಸಾವಿರ ಕೋಟಿ ರೂ. ಗೂ ಅಧಿಕ ವ್ಯಾಪಾರ ವಹಿವಾಟು ನಡೆಸುತ್ತಿದೆ. 45 ಸಾವಿರಕ್ಕೂ ಹೆಚ್ಚು ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಇದೊಂದು ಮಹಿಳಾ ಸ್ವ-ಉದ್ಯೋಗ ಸಂಸ್ಥೆಯಾಗಿದ್ದು, ಇಲ್ಲಿ ಹೆಚ್ಚಾಗಿ ಮಹಿಳೆಯರು ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವುದು ಮತ್ತು ಮಹಿಳೆಯರನ್ನು ಸಬಲೀಕರಣ ಮಾಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು. ಆದ್ದರಿಂದ ನಮ್ಮ ಜಿಲ್ಲೆಯ ಮಹಿಳೆಯರು ಸ್ವ-ಉದ್ಯೋಗ ಮಾಡಿದರೆ ಕುಟುಂಬದ ಆರ್ಥಿಕ ನಿರ್ವಹಣೆಗೆ ಅನೂಕೂಲವಾಗಲಿದೆ. ಹಾಗೆಯೇ ಮಹಿಳೆಯರಿಗೆ ಆರ್ಥಿಕ ಸ್ಥಿತಿಗತಿ ಅರ್ಥವಾಗುತ್ತದೆ. ಮಹಿಳೆಯರು ಗೌರವ ಕಾಪಾಡಬೇಕು, ಸ್ವಾವಲಂಬಿಯಾಗಲು ಇದೊಂದು ದೊಡ್ಡ ಅಸ್ತ್ರವಾಗಿದೆ ಎಂದು ಸಲಹೆ ನೀಡಿದರು. ಗದುಗಿನಲ್ಲಿ ಈಗಾಗಲೇ 382 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, 172 ಮಹಿಳೆಯರು ಕೆಲಸ ಆರಂಭಿಸಿದ್ದಾರೆ. 150ಕ್ಕೂ ಹೆಚ್ಚು ಮಹಿಳೆಯರು ತರಬೇತಿ ಪಡೆಯುತ್ತಿದ್ದಾರೆ. ಈಗಾಗಲೇ ಗದುಗಿನ ಮಹಿಳೆಯರು ಈಗಾಗಲೇ 220, 170, 150 ಕೆಜಿ ಪಾಪಡ್ ತಯಾರಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಮಹಿಳೆಯರು ರಾಜ್ಯದಲ್ಲಿ ನಂ.1 ಸ್ಥಾನದಲ್ಲಿ ಪಾಪಡ್ ತಯಾರಿಸಬೇಕು. ಹಾಗೆಯೇ ಸಾವಿರಾರು ಮಹಿಳೆಯರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು ಎಂದರು. ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡನ 84ನೇ ಶಾಖೆ ಆರಂಭಕೂ ಸಚಿವ ಎಚ್.ಕೆ. ಪಾಟೀಲ ಅವರಿಗೂ ಅವಿನಾಭಾವ ಸಂಬಂಧವಿದೆ. ಎಚ್.ಕೆ. ಪಾಟೀಲರು ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಬಾರಿ ಆಯ್ಕೆಯಾಗಿ ಸಾರ್ವಜನಿಕ ಬದುಕು ಆರಂಭಿಸಿದ್ದು 1984ರಲ್ಲಿ. 84 ಲಕ್ಕಿ ನಂಬರ್ ಆಗಿದ್ದು, ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ಸಂಪೂರ್ಣ ನಂಬಿಕೆಯಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹಲವಾರು ಕೆಲಸವನ್ನು ಮಾಡಲಾಗುತ್ತದೆ ಎಂದರು. ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡ ಅಧ್ಯಕ್ಷೆ ಸ್ವಾತಿ ಪರಾಡಕರ್ ಅಧ್ಯಕ್ಷತೆ ವಹಿಸಿ ಸಂಸ್ಥೆಯ ಧ್ಯೇಯೊದ್ದೇಶ ಹಾಗೂ ತತ್ವ ಸಿದ್ದಾಂತಗಳನ್ನು ವಿವರಿಸಿದರು. ಉಪಾಧ್ಯಕ್ಷೆ ಪ್ರತಿಭಾ ಸಾವಂತ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರರದ ಅಧ್ಯಕ್ಷ ಅಶೋಕ ಮಂದಾಲಿ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಗುರಣ್ಣ ಬಳಗಾನೂರ ಸೇರಿದಂತೆ ಮಹಿಳಾ ಸದಸ್ಯರು ಇದ್ದರು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರಭು ಬುರಬುರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ಲದೇ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 