ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ ಮಹಿಳಾ ವಿವಿಯ ಯೋಗ ತಂಡ

Women's University Yoga Team in Inter-University Competition

 ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ  ಮಹಿಳಾ ವಿವಿಯ ಯೋಗ ತಂಡ 

ವಿಜಯಪುರ 22: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಯೋಗ ತಂಡವು ಇದೇ ಡಿಸೆಂಬರ್ 24 ರಿಂದ 28 ರವರೆಗೆ ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಭುವನೇಶ್ವರದಲ್ಲಿ ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ  ಮಹಿಳಾ ವಿವಿಯ ಯೋಗ ತಂಡ ಭಾಗವಹಿಸಲಿದ್ದು, ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್‌.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಹಾರೈಸಿದ್ದಾರೆ.