ಜಡಿಮಠದಲ್ಲಿ ಮಹಿಳಾ ಗೋಷ್ಠಿ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ.
Women's conference and clothing distribution program for women at Jadimath
ಜಡಿಮಠದಲ್ಲಿ ಮಹಿಳಾ ಗೋಷ್ಠಿ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ.
ದೇವರಹಿಪ್ಪರಗಿ 31: ಪಟ್ಟಣದ ಜಡಿ ಸಿದ್ದೇಶ್ವರ ಜಡಿಮಠದ ನೂತನ ಕಟ್ಟಡದ ಲೋಕಾರೆ್ಣ ಮತ್ತು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಡಿ ಸಿದ್ದೇಶ್ವರ ಶಿವಾಚಾರ್ಯರ ಪಟ್ಟಾಧಿಕಾರದ 25ನೇ ವರ್ಷದ ವರ್ಧಂತಿ ಮಹೋತ್ಸವ ಪ್ರಯುಕ್ತ ಮಠದ ಆವರಣದಲ್ಲಿ ಶುಕ್ರವಾರ ನಡೆದ ವರದಾನಿ ಗುಡ್ಡಾಪುರದ ದಾನಮ್ಮ ದೇವಿ ಮಹಾಪುರಾಣ ಪ್ರವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಿಳಾ ಗೋಷ್ಠಿ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಶಾಸಕರಾದ ರಾಜುಗೌಡ ಪಾಟೀಲ ಕುದುರಿ ಸಾಲವಾಡಗಿ ಅವರ ಧರ್ಮಪತ್ನಿಯಾದ ಜಯಶ್ರೀ ರಾಜುಗೌಡ ಪಾಟೀಲ ಅವರು, ಮಹಿಳಾ ಗೋಷ್ಠಿ ಹಾಗೂ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ.ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ನೀತಿಕತೆ ಗೂಡಿಸಿಕೊಂಡರೆ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ನಾಗರಿಕರ ಅಗತ್ಯವಿದೆ. ಅದರಂತೆ ಮಗು ಬೆಳೆದು ಉತ್ತಮ ನಾಗರಿಕನಾಗಬೇಕಾದರೆ ತಾಯಿಯ ಪಾತ್ರ ಮಹತ್ವವಿದೆ ಎಂದರು. ಪ್ರವಚನಕಾರ ಶರಣ ಶಾಸ್ತ್ರಿ ಮಾತನಾಡಿ, ಭಾರತದಲ್ಲಿರುವಷ್ಟು ಮಹಿಳಾ ಪ್ರಧಾನ(ದೇವತೆಗಳ) ದೇವಾಲಯಗಳು ವಿಶ್ವದ ಯಾವುದೇ ರಾಷ್ಟ್ರಗಳಲ್ಲಿಲ್ಲ ಎಂದರು. ಉಪನ್ಯಾಸಕರುಗಳಾದ ಮಹದೇವಿ ಕೆ ಪಾಟೀಲ ಹಾಗೂ ವಿಜಯಲಕ್ಷ್ಮಿ ಹಿರೇಮಠ ಅವರು ಮಾತನಾಡಿ, ಪುರುಷನ ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬ ಮಾತೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕೆಲಸದಲ್ಲೂ ಮಹಿಳೆ ಮುಂದಿರುವದು ಸಂತಸದ ಸಂಗತಿ ಎಂದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಮಠದ ಷ.ಬ್ರ. ಜಡಿ ಸಿದ್ದೇಶ್ವರ ಶಿವಾಚಾರ್ಯರು ವಹಿಸಿ ಆಶೀರ್ವಚನ ನೀಡಿದರು. ವೇದಿಕೆಯ ಮೇಲೆ ಮಹಿಳಾ ಮುಖಂಡರುಗಳಾದ ಸಂಗೀತ ಆರ್ ನಾಯಿಕ ಹಾಗೂ ಗಂಗಾಬಾಯಿ ಬೇವನೂರ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು, ಗಣ್ಯರು, ಸೇವಾ ಸಮಿತಿ ಸದಸ್ಯರು,ಮಹಿಳೆಯರು ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 