ಗದಗ 08: ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯಿಂದ ಮಹಿಳೆಯರು ಆಥರ್ಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ರಾಜ್ಯದ ಕೌಶಲ್ಯಾಭಿವೃದ್ಧಿ, ಮುಜರಾಯಿ ಇಲಾಖೆಗಳ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ನುಡಿದರು.
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳ ಸಮಾವೇಶ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾರಂಪರಿಕ ಕಲೆ ಉಳಿಸಿ ಬೆಳೆಸುವ ಸಲುವಾಗಿ ರಾಜ್ಯದ 5ಕಡೆ ಹಡಗಲಿ, ಗದಗ, ಹರಪನಹಳ್ಳಿ, ಸುರಗೊಂಡನಕೊಪ್ಪ, ರಾಮನಗರ ಜಿಲ್ಲೆಯ ಕನಕಪುರಗಳಲ್ಲಿ ಮೊದಲನೇ ಹಂತದಲ್ಲಿ ಲಂಬಾಣಿ ಕಸೂತಿ ಕೇಂದ್ರಗಳನ್ನು ಆದಷ್ಟು ಶೀಘ್ರ ಪ್ರಾರಂಭಿಸಲಾಗುವುದು. ಮಹಿಳೆಯರಲ್ಲಿ ಆಥರ್ಿಕ ಸ್ವಾವಲಂಬನೆ ಹೆಚ್ಚಿಸುವ ಸಲುವಾಗಿ ಕಸೂತಿ ಕೇಂದ್ರಗಳ ಘಟಕಗಳನ್ನು ಪ್ರಾರಂಭ ಮಾಡಿಸಿ 5ರಿಂದ 10 ಗುಂಪುಗಳನ್ನು ಮಾಡಿ 3ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುವುದು. ಸದರಿ ಅವಧಿಯಲ್ಲಿ ಸ್ಟೈಪಂಡ್ ಕೊಡಲಾಗುವುದು. ಮಹಿಳೆಯರು ಟೇಲರಿಂಗ್, ಗೃಹ ಬಳಕೆ ಉತ್ಪನ್ನಗಳ ಕೆಲಸದ ಕಡೆ ಗಮನಕೊಟ್ಟು ಶೈಕ್ಷಣಿಕವಾಗಿ ಹಾಗೂ ಆಥರ್ಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದರು.
ಶಾಸಕ ಎಚ್.ಕೆ.ಪಾಟೀಲ ಅವರು ಮಾತನಾಡಿ ಜಿಲ್ಲೆಯಲ್ಲಿ 3971 ಸ್ತ್ರೀ ಶಕ್ತಿ ಗುಂಪುಗಳು ಕಾರ್ಯನಿರ್ವಹಿಸುತ್ತಿದ್ದು ಗದಗ ಜಿಲ್ಲೆಯು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಲ್ಲಿ ರಾಷ್ಟ್ರಿಯ ಪುರಸ್ಕಾರ ಪಡೆದುಕೊಂಡಿದ್ದು ಗದಗ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಮಹಿಳೆಯರು ಕೌಶಲ್ಯಾಭಿವೃದ್ಧಿಯಲ್ಲಿ ಸಮರ್ಪಕವಾಗಿ ಕೆಲಸ ಮಾಡಲು ಸಿದ್ಧರಾಗಬೇಕು. ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಪಾಟೀಲ ತಿಳಿಸಿದರು.
ಗದಗ ಜಿ.ಪಂ. ಸದಸ್ಯೆ ಶೋಭಾ ಮೇಟಿ ಅವರು ಮಾತನಾಡಿ ಒಬ್ಬೊಬ್ಬ ಮಹಿಳೆಯರಲ್ಲಿಯೂ ಸಹ ಒಂದೊಂದು ಪ್ರತಿಭೆಗಳಿದ್ದು ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರು ಆಥರ್ಿಕವಾಗಿ, ಶೈಕ್ಷಣಿಕ ಮುಂದುವರಿಯುವುದರ ಜೊತೆಗೆ ಸ್ವಂತ ನಿಧರ್ಾರವನ್ನು ತೆಗೆದುಕೊಳ್ಳುವ ಶಕ್ತಿ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯವು ಸ್ವೇಚ್ಛಾಚಾರವಾಗಬಾರದು. ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಈಗಿನ ತಾಯಂದಿರು ಹೆಚ್ಚಿನ ಗಮನಹರಿಸಬೇಕೆಂದು ಶೋಭಾ ಮೇಟಿ ತಿಳಿಸಿದರು. ಜಿ.ಪಂ. ಮಹಿಳಾ ಸದಸ್ಯರುಗಳು, ಜಿಲ್ಲೆಯ ಸ್ತ್ರೀ ಶಕ್ತಿ ಸಂಘದವರು, ಅಸಾಧಾರಣ ಪ್ರತಿಭಾ ಪುರಸ್ಕಾರ ಪಡೆದಂತಹ ಮಕ್ಕಳು, ವಿವಿಧ ತಾಲೂಕುಗಳ ಅಂಗನವಾಡಿ ಮೇಲ್ವಿಚಾರಕಿಯರು, ಮಹಿಳಾ ಇಲಾಖೆಯ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ರಾಮಣ್ಣ ಲಮಾಣಿ, ಗದಗ ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಈರಪ್ಪ ನಾಡಗೌಡರ, ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ಜಿ.ಪಂ. ಸದಸ್ಯರುಗಳಾದ ರೂಪಾ ಅಂಗಡಿ, ಮಂಜುಳಾ ಹುಲ್ಲಣ್ಣವರ, ಜಿ.ಪಂ. ಸದಸ್ಯರುಗಳಾದ ವಾಸಣ್ಣ ಕುರಡಗಿ, ಸಿದ್ಧುಪಾಟೀಲ, ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶ್ರೀನಾಥ ಜೋಶಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ರಾಮಕೃಷ್ಣ ಪಡಗಣ್ಣವರ, ಮಹಿಳಾ ಮತ್ತು ಮಕ್ಕಳ ಇಲಾಖೆಯ ನಿರೂಪಣಾಧಿಕಾರಿ ಅಕ್ಕಮಹಾದೇವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ತ್ರೀ ಶಕ್ತಿ ಸಂಘದವರು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಮಹಿಳೆಯರು ಉಪಸ್ಥಿತರಿದ್ದರು. ಪ್ರಿಯಾಂಕಾ ಹಾವೇರಿ ಭಾವಗೀತೆ ಪ್ರಸ್ತುತಪಡಿಸಿದರು. ಎಸ್.ಎಸ್.ಗೌಡರ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.