ಮಹಿಳೆಯರು ಸಬಲೀಕರಣದ ಶಕ್ತಿ ಒನಕೆ ಓಬವ್ವ: ತಹಶೀಲ್ದಾರ್
Women are the power behind empowerment: Tahsildar
ಬ್ಯಾಡಗಿ 12 : ಸ್ತ್ರೀ ಸಬಲೀಕರಣದ ಶಕ್ತಿ ವೀರವನಿತೆ ಒನಕೆ ಓಬವ್ವ. ಅವರ ಚರಿತ್ರೆ ತಿಳಿಯಲು ನಾವು ಪ್ರಯತ್ನಿಸಬೇಕು ಎಂದು ತಹಶಿಲ್ದಾರ ಚಂದ್ರಶೇಖರ್ ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ವೀರವನಿತೆ ಒನಕೆ ಒಬ್ಬವ ಜಯಂತಿ ಕಾರ್ಯಕ್ರಮದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮಾತನಾಡಿದರು. ಗಂಡಿನ ಪ್ರತಿ ಸಾಧನೆಯ ಹಿಂದೆ ಹೆಣ್ಣಿನ ಶಕ್ತಿ ಇರುತ್ತದೆ ಎಂಬುವುದಕ್ಕೆ ಉದಾಹರಣೆ ಒನಕೆ ಓಬವ್ವ. ಒನಕೆಯಿಂದ ಶತ್ರುಗಳನ್ನು ಸದೆ ಬಡಿದಿದ್ದರು. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆಂತರಿಕವಾಗಿ ಬದಲಾಗಬೇಕು. ಸರ್ಕಾರದ ಹಲವು ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಮುಖಂಡ ಮುರಿಗೆಪ್ಪ ಶೆಟ್ಟರ ಮಾತನಾಡಿ ‘ನಿಷ್ಠೆ, ತ್ಯಾಗ, ಧೈರ್ಯದ ಸಂಗಮ ಒನಕೆ ಓಬವ್ವ. 18ನೇ ಶತಮಾನದಲ್ಲಿ ರಾಷ್ಟ್ರೀಯತೆ ಎಂಬ ಪರಿಕಲ್ಪನೆಯೇ ಬಂದಿರದ ಸಮಯದಲ್ಲಿ ಒನಕೆ ಓಬವ್ವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ್ದಾರೆ. ನಾವೆಲ್ಲ ಓಬವ್ವ ಅವರಿಂದ ಸ್ಫೂರ್ತಿ ಪಡೆಯಬೇಕು. ಛಲವಾದಿ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಹೋಗಬೇಕು’ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬಿ ಸಿ ಎಂ ಅಧಿಕಾರಿ ಪ್ರಸಾದಿಮಠ.ಆರ್ ಎಂ ಕಡಕೋಳ.ನಾಗರಾಜ ಗುಳೇರ.ಎಸ್ ಆರ್ ಹೀರೆಮಠ.ಹಾಗು ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 