ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಓದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ
ಬ್ಯಾಡಗಿ 17: ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಓದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮ ಮಹತ್ವರವಾದ್ದು ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಹೇಳಿದರು.ಅವರು ಪಟ್ಟಣದ ವರ್ತಕರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಉಧ್ಘಾಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯೋಜನೆಯು ಸಮಾಜದಲ್ಲಿ ಮಹಿಳೆಯರ ಸ್ವ ಉದ್ಯೋಗ ಕಂಡುಕೊಂಡು ಆರ್ಥಿಕ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ತಿಳಿಸಿದರು.
ತಾಲೂಕಾ ಯೋಜನಾಧಿಕಾರಿಜಿ. ರಘುಪತಿ ಮಾತನಾಡಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಮಹಿಳೆಯರಲ್ಲಾದ ಬದಲಾವಣೆಗಳು, ಮಕ್ಕಳ ಲಾಲನೆ ಪಾಲನೆಯಲ್ಲಿ ತಾಯಿಯ ಪಾತ್ರದ ಬಗ್ಗೆ ವಿವರಿಸಿದರು.ಪಿಎಸ್‌ಐ ಅರವಿಂದ ಮಹಿಳೆಯರಿಗೆ ಕಾನೂನಿನ ಅರಿವಿನ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾದ್ಯಾಯ ಎಸ್ ಬಿ ಸವಕ್ಕನವರ, ಮಾರುತಿ ಶಿಡ್ಲಪುರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು, ಕೃಷಿ ಅಧಿಕಾರಿ, ವಿಚಕ್ಷಣಾಧಿಕಾರಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.