ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠ-ಸಂತೋಷ್ ಗಣಾಚಾರಿ

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠ-ಸಂತೋಷ್ ಗಣಾಚಾರಿ Women empowerment is strengthened by five guarantee schemes - Santosh Ganachari


ಕೊಲ್ಹಾರ  12 : ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠವಾಗಿದೆ ಎಂದು ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಲ್ಹಾರ ತಾಲೂಕಾ ಅಧ್ಯಕ್ಷ ಸಂತೋಷ್ ಗಣಾಚಾರಿ ತಿಳಿಸಿದರು.ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಹಳೇರೊಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಹಳಿರೋಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಸರ್ಕಾರ ಮಹಿಳೆಯರ ಸಬಲೀಕರಣಕ್ಕೋಸ್ಕರ ಯೋಜನೆಗಳನ್ನು ಕೊಟ್ಟು ಮಹಿಳೆಯರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಬಹಳ ಮಹತ್ವವಾಗಿವೆ.ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಇವು ಸಹಕಾರಿಯಾಗಿವೆ. ಕುಟುಂಬದ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.ಪಂಚ ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ವಂಚಿತರಾಗಿದ್ದಲ್ಲಿ ಸೂಕ್ತ ದಾಖಲೆ ಸಲ್ಲಿಸಿದರೆ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.  

 ಜಿಲ್ಲಾ ಗ್ಯಾರೆಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಭಾರತಿ ಹಡಪದ ಮಾತನಾಡಿ ಗೃಹಲಕ್ಷ್ಮೀ ಯೋಜನೆಯಡಿ ದೊರೆತ ಹಣದಲ್ಲಿ ಹಸು ಖರೀದಿಸಿದ್ದಾರೆ . ಇದರಿಂದ ಅವರ ಕುಟುಂಬ ನಿರ್ವಹಣೆ ಸುಧಾರಿಸಿದ್ದಾರೆ ಕೆಲವೊಂದು ಕುಟುಂಬಗಳು ಭೂರಹಿತರಾದ ಜನರಿದ್ದಾರೆ ಅನ್ನಭಾಗ್ಯ ಯೋಜನೆಯಿಂದ ಹೊಟ್ಟೆತುಂಬಾ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯ ಮಾಡಿದ್ದಾರೆ . ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ’ ಎಂದು ಅವರು ಹೇಳಿದರು.ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ಹೆಣ್ಣು ಮಕ್ಕಳಿಗೆ ನೋಟು ಬುಕ್ ಪೆನ್ನು ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ಎನ್‌.ಕೆ ನದಾಫ್, ತಾಲ್ಲೂಕು ಪಂಚಾಯಿತಿ ಅಧಿಕಾರಿ ಸುನಿಲ್ ಮುದ್ದಿನ್,ರಾಮನಗೌಡ ಪಾಟೀಲ(ತಾಲ್ಲೂಕು ಪಂಚಾಯಿತಿ ಅಕೌಂಟೆಂಟ್ ),ಮಹಿಳಾ ಮತ್ತು ಮಕ್ಕಳ ಕಲ್ಯಾಣ ಧಿಕಾರಿಗಳಾದ ಪಾರ್ವತಿ ಹಳ್ಳದ, ಜ್ಯೋತಿ ಆಳಗಿ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಆನಂದ ಕೋಟ್ಯಾಳ,ಈರಣ್ಣ ನಾಗರಾಳ, ಲಕ್ಷ್ಮಣ ಸುನಗದ,ದುಂಡಪ್ಪ ರೊಳ್ಳಿ, ತಾಲ್ಲೂಕು ಗ್ಯಾರಂಟಿ ಸದಸ್ಯ ಮೋತಿಲಾಲ್ ಲಮಾಣಿ, ಕಮಲಾಬಾಯಿ ಮಾಕಾಳಿ,ಜಯಶ್ರೀ ಲಮಾಣಿ,ಕೃಷ್ಣ ರಾ ಲಮಾಣಿ ಹಾಗೂ ಬಸು ಚಲವಾದಿ ಹಾಗೂ ಗ್ಯಾರಂಟಿ ಯೋಜನೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.