ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಸನ್ಮಾನಿಸಿದ ಮಹಿಳೆಯರು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಸನ್ಮಾನಿಸಿದ ಮಹಿಳೆಯರು  Women felicitated Minister Lakshmi Hebbalkar

ಇಂಡಿ 04:  ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ ಅವರು ಚಡಚಣ ತಾಲ್ಲೂಕಿನ ಲೋಣಿ ಗ್ರಾಮದ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಸಂಭ್ರಮ್ಸೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋರಟ ಸಚಿವೆಯನ್ನು ಇಂಡಿ ತಾಲ್ಲೂಕಿನ ಝಳಕಿ ಗ್ರಾಮದ ಬಳಿ ಮಾರ್ಗದ ಮಧ್ಯೆ ಇಂಡಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಗೀತಾ ಗುತ್ತರಗಿಮಠ ಹಾಗೂ ಸಿಐಟಿಯು ಸಂಘಟನೆಯ ಇಂಡಿ ತಾಲೂಕು ಅಧ್ಯಕ್ಷರಾದ ಶ್ರೀಮತಿ ಭಾರತಿ ವಾಲಿ ಅವರ ನೇತೃತ್ವದಲ್ಲಿ ನೂರಾರು ಮಹಿಳೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸನ್ಮಾನಿಸಿ ಪುಷ್ಪ ಗುಚ್ಛ ನೀಡಿ ಆರತಿ ಬೆಳಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಐಟಿಯು ಇಂಡಿ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀರಿಜಾ ಸಕ್ರಿ ಮಿನಾಕ್ಷೀ ಚವ್ಹಾಣ ನಾಗರತ್ನ ಸಕ್ರಿ ಹಾಗೂ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು ಹಾಗೂ ಲಕ್ಷ್ಮೀ ಹೆಬ್ಬಾಳಕರ ಕಟ್ಟಾ ಅಭಿಮಾನಿ ತಾಂಬಾ ಗ್ರಾಮದ ಶ್ರೀಧರ ಅವಟಿ ಹಾಗೂ ಅವರ ಅಭಿಮಾನಿ ಬಳಗ ಸೇರಿ  ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸನ್ಮಾನಿಸಿ ಮನವಿ ಪತ್ರ ಸಲ್ಲಿಸಿ, ಲಕ್ಷ್ಮೀ ಹೆಬ್ಬಾಳಕರವರಿಗೆ ಜಯವಾಗಲಿ ಎಂದು ಜೈಕಾರ ಹಾಕಿದರು.ಈ ಸಂದರ್ಭದಲ್ಲಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.