ಮಹಿಳೆಯರು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು: ಡಾ. ನಾಗಲಕ್ಷ್ಮೀ ಚೌಧರಿ
Women must raise their voices against atrocities: Dr. Nagalakshmi Choudhary
ಲೋಕದರ್ಶನ ವರದಿ
ಗದಗ, 31: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಅನ್ಯಾಯ ಹಾಗೂ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾಗದೆ ಧೈರ್ಯದಿಂದ ಬದುಕಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಮಹಿಳೆಯರ ಯಶಸ್ಸಿಗೆ ಪುರುಷರ ಸಹಕಾರವೂ ಅಗತ್ಯವಾಗಿದೆ. ಯಾವುದೇ ಮಹಿಳೆ ತನ್ನ ಮೇಲಿನ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಕಓಖಊ ಂಛಿಣ ಸೇರಿದಂತೆ ಮಹಿಳೆಯರ ರಕ್ಷಣೆಗೆ ಹಲವು ಕಾನೂನುಗಳು ಜಾರಿಯಲ್ಲಿದ್ದು, ಅವುಗಳ ಬಗ್ಗೆ ಅರಿವು ಹೊಂದಬೇಕು ಎಂದು ಹೇಳಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಎದುರಾದರೆ ಕಓಖಊ ಂಛಿಣ ಅಡಿಯಲ್ಲಿ ರಚಿಸಿರುವ ಸಮಿತಿಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು. ಈ ಕಾಯ್ದೆಯ ಬಗ್ಗೆ ತಪ್ಪು ತಿಳುವಳಿಕೆ ಹೊಂದದೆ, ಅದರ ಉದ್ದೇಶವನ್ನು ಅರಿತುಕೊಳ್ಳಬೇಕು. ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 