ಆರ್ಥಿಕ ಸ್ವಾವಲಂಬನೆ ಸಾಧಿಸಲು ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಮುಂದುವರಿಯಬೇಕು: ಶಂಕರಗೌಡ ಸೋಮನಾಳ
Women should continue in the employment sector to achieve economic self-reliance: Shankaragowda Som
ಆರ್ಥಿಕ ಸ್ವಾವಲಂಬನೆ ಸಾಧಿಸಲು ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಮುಂದುವರಿಯಬೇಕು: ಶಂಕರಗೌಡ ಸೋಮನಾಳ
ವಿಜಯಪುರ 29: ಜಗತ್ತನ್ನು ಬದಲಿಸಲು ಪ್ರತಿಭೆಗೆ ತಕ್ಕ ಉದ್ಯೋಗವನ್ನು ಮಹಿಳೆಯರು ಸೃಷ್ಟಿಸಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಉದ್ಯೋಗ ಸೃಷ್ಟಿ ಮತ್ತು ಸಬಲೀಕರಣ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ಸ್ವಾವಲಂಬನೆ ಸಾಧಿಸಲು ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಮುಂದುವರಿಯಬೇಕು. ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುತ್ತಿರುವ ವಿವಿಧ ಸೌಲಭ್ಯಗಳು ಮತ್ತು ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ರೂಸಾ ಘಟಕದ ನೋಡಲ್ ಅಧಿಕಾರಿ ಪ್ರೊ. ಗಂಗಾಧರ್ ಬಿ. ಸೋನಾರ್ ಮಾತನಾಡಿ, ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಅವರು ವಿದ್ಯಾರ್ಥಿನಿಯರು ವಿವಿಧ ಕೌಶಲ್ಯ ತಂತ್ರಗಳನ್ನು ಕಲಿತು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸ್ನಾತಕ ವಿಭಾಗದ ವಿಶೇಷ ಅಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ಸಂಪನ್ಮೂಲ ವ್ಯಕ್ತಿಗಳು ಹಂಚಿಕೊಂಡ ವಿಚಾರಧಾರೆಗಳನ್ನು ವಿದ್ಯಾರ್ಥಿನಿಯರು ಜೀವನದಲ್ಲಿ ಅಳವಡಿಸಿಕೊಂಡು, ಓದಿನ ಜೊತೆಗೆ ಸ್ವಯಂ ಉದ್ಯೋಗ ಆರಂಭಿಸುವ ಮೂಲಕ ನಿಜವಾದ ಮಹಿಳಾ ಸಬಲೀಕರಣವನ್ನು ಸಾಧಿಸಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಜಗದೀಶ್ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ನಾತಕ ವಿಭಾಗದ ಸಂಯೋಜಕ ಡಾ.ಜಿ.ಸೌಭಾಗ್ಯ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ರೂಪ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 