ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗೀರೀಶ್.ವಿ ಕುಲಕರ್ಣಿ
Women should develop creative skills: Girish.V Kulkarni
ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗೀರೀಶ್.ವಿ ಕುಲಕರ್ಣಿ
ಬಳ್ಳಾರಿ 31: ಮಹಿಳಾ ಸಬಲೀಕರಣ ಸಮಾಜದಲ್ಲಿ ಬಹುಮುಖ್ಯವಾಗಿದ್ದು, ಮಹಿಳೆಯರು ವಿವಿಧ ರೀತಿಯ ಸ್ವ-ಉದ್ಯೋಗ ಮಾಡಲು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್‌ನ ಲೀಡ್ ಡಿಸ್ಟ್ರೀಕ್ ಮ್ಯಾನೇಜರ್ ಗೀರೀಶ ವಿ ಕುಲಕರ್ಣಿ ಅವರು ಹೇಳಿದರು.
ಕೆನರಾ ಬ್ಯಾಂಕ್ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಹೊಂದಿದ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಟೂಲ್‌ಕಿಟ್ ವಿತರಿಸಿ ಅವರು ಮಾತನಾಡಿದರು.ಮಹಿಳೆಯರು ಮನೆಯಲ್ಲಿ ಕುಳಿತು ಟೈಲರಿಂಗ್ ಮಾಡುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುತ್ತಾರೆ ಹಾಗೂ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಹೋಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದರು.
ಕೆನರಾ ಬ್ಯಾಂಕ್‌ನ ವಿಭಾಗೀಯ ಪ್ರಬಂಧಕರಾದ ಮಾಲತಿ ಅವರು ಮಾತನಾಡಿ, ಮಹಿಳೆಯರು ಮನೆಯಲ್ಲಿ ಟೈಲರಿಂಗ್ ಮಾಡಿಕೊಂಡು ಆರ್ಥಿಕವಾಗಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.ನಿರ್ದೇಶಕರಾದ ರಾಜೆಸಾಬ್.ಎಚ್ ಎರಿಮನಿ ಮಾತನಾಡಿ, ಸಂಸ್ಥೆಯ ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಘಟಕದ ರಾಜೇಂದ್ರ ವಿಜಯ ಕುಮಾರ ಸೇರಿದಂತೆ ಜಡೆಪ್ಪ, ದಿನೇಶ, ಸಿದ್ದಲಿಂಗಮ್ಮ, ಮಂಜುಳಾ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ ಶಿಭಿರಾರ್ಥಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 