ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಒಳ್ಳೆಯ ವಾತಾವರಣವಿರಬೇಕು
ಇಂದುಮತಿ ಪಾಟೀಲ, ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತ ಅಧಿಕಾರಿ ಸುದರ್ಶನ ಕುಲಕರ್ಣಿ ಇತರರು ಉಪಸ್ಥಿತರಿದ್ದರು
ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಒಳ್ಳೆಯ ವಾತಾವರಣವಿರಬೇಕು
ಹಾವೇರಿ 25: ಮಹಿಳೆಯರು ಕೆಲಸಮಾಡುವ ಸ್ಥಳಗಳಲ್ಲಿ ಒಳ್ಳೆಯ ವಾತಾವರಣ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ ಅವರು ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ರವಿವಾರ ಅಂತರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನದ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯ ಮಹಿಳೆಯರ ಸುರಕ್ಷತೆಗಾಗಿ ಹಲವಾರು ನಿರ್ದೇಶನಗಳನ್ನು ನೀಡಿದೆ. ಮಹಿಳೆಯರು ಅವುಗಳ ಲಾಭ ಪಡೆದುಕೊಳ್ಳಬೇಕು. ಕಾನೂನು ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪೆನಲ್ ವಕೀಲರಾದ ಶ್ರೀಮತಿ ಕೆ.ಜಿ.ಕಿತ್ತೂರ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ ಕುರಿತು ಉಪನ್ಯಾಸ ನೀಡಿದರು
ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎಸ್.ಟಿ.ಎಸ್.ಸಿ.1 ನಿಂಗೌಡ ಪಾಟೀಲ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ, ಸರ್ಕಾರಿ ಅಭಿಯೋಜಕಿ ಶ್ರೀಮತಿ ಸರೋಜಾ ಕೂಡಲಗಿಮಠ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಶ್ರೀಮತಿ ಇಂದುಮತಿ ಪಾಟೀಲ, ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತ ಅಧಿಕಾರಿ ಸುದರ್ಶನ ಕುಲಕರ್ಣಿ ಇತರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 