ಮಹಿಳೆಯರು ಕೆಲಸದ ಸ್ಥಳದಲ್ಲಿ ಉತ್ತಮ ಭಾಂದವ್ಯ ಹೊಂದಿರಬೇಕು
Women should have good relationships in the workplace
ಬಳ್ಳಾರಿ 26: ಮಹಿಳೆಯರು ತಾವು ಕೆಲಸ ಮಾಡುವ ಸ್ಥಳ, ಕಚೇರಿ ಮತ್ತು ಮನೆಯಲ್ಲೂ ಉತ್ತಮ ಭಾಂದವ್ಯ ಹೊಂದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಏರಿ್ಡಸಿದ್ದ ‘ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತರಾಷ್ಟ್ರೀಯ ದಿನ’ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮತ್ತು ಪುರುಷರು ಪರಸ್ಪರ ಗೌರವ ಮನೋಭಾವನೆಯಿಂದ ಕಾಣಬೇಕು. ಮಹಿಳೆಗೆ ಸಮಸ್ಯೆ ಉಂಟಾದಲ್ಲಿ ಅವರ ರಕ್ಷಣೆಗಾಗಿ ಮಹಿಳಾ ದೌರ್ಜನ್ಯ ನಿರ್ಮೂಲನಾ ಕಾಯ್ದೆ ಇದ್ದು, ಇದರ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದ ವಕೀಲರಾದ ಶಿವಲೀಲ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, 10 ಜನಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳಾ ಆಂತರಿಕ ದೂರು ಸಮಿತಿ ಇರಬೇಕು. ಮಹಿಳೆ ತನ್ನ ಮೇಲೆ ದೈಹಿಕ, ಮಾನಸಿಕ ಸೇರಿದಂತೆ ಯಾವುದೇ ರೀತಿ ದೌರ್ಜನ್ಯವಾದಲ್ಲಿ ಮೂರು ತಿಂಗಳೊಳಗೆ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಬೇಕು. ಬಳಿಕ ಸಮಿತಿ ಪರೀಶೀಲನಾ ಕ್ರಮ ಕೈಗೊಳ್ಳಲಾಗುತ್ತದೆ. ಇಲ್ಲಿ ಸೌಹಾರ್ದಕ್ಕೆ ರಾಜಿ ಆಗಬಹುದು ಆದರೆ ಹಣಕ್ಕಾಗಿ ಅಲ್ಲ, ಪರಸ್ಪರ ಗೌರವದಿಂದ ಹೊಂದಿಕೊಂಡು ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬಡ ಜನತೆಗೆ ಇರುವ ಕಾನೂನು ಸೇವೆಗಳ ಮಾಹಿತಿ ಕುರಿತ ವೀಡಿಯೋ ಚಿತ್ರಣ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಅಧಿಕಾರಿ-ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 