ಜಿಲ್ಲೆಯ ಬುಡಕಟ್ಟು ಜನತೆಯ ಸರ್ವತೋಮುಖ ಅಭಿವೃಧ್ದಿಗೆ ಕಾರ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ.
Work for the all-round development of the tribal people of the district: Additional District Collec
ಜಿಲ್ಲೆಯ ಬುಡಕಟ್ಟು ಜನತೆಯ ಸರ್ವತೋಮುಖ ಅಭಿವೃಧ್ದಿಗೆ ಕಾರ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ.
ಕಾರವಾರ 06: ಜಿಲ್ಲೆಯಲ್ಲಿರುವ ಬುಡಕಟ್ಟು ಸಮುದಾಯದ ಜನತೆಯ ಸರ್ವತೋಮುಖ ಮತ್ತು ಸರ್ವಾಂಗೀಣ ಅಭಿವೃಧ್ದಿಯ ದೃಷ್ಟಿಯಿಂದ ಆದಿ ಕರ್ಮಯೋಗಿ ಅಭಿಯಾನದದ ಮೂಲಕ ಜಿಲ್ಲೆಯ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಹಾಗೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
ಅವರು ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉತ್ತರ ಕನ್ನಡ ಜಿಲ್ಲೆ ವತಿಯಿಂದ, ಧರ್ತಿ ಅಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕ್ರಿಮ್ಸ್ ಸಭಾ ಭವನದಲ್ಲಿ ಆಯೋಜಿಸಿದ್ದ ಒಂದು ದಿನದ ಓರಿಯಂಟೇಶನ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.ಧರ್ತಿ ಅಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಜಿಲ್ಲೆಯ ಹಳಿಯಾಳ, ಜೋಯಿಡಾ, ಮುಂಡಗೋಡು ಮತ್ತು ಭಟ್ಕಳ ತಾಲೂಕಿನ 31 ಗ್ರಾಮಗಳು ಆಯ್ಕೆಯಾಗಿದ್ದು, ಈ ಗ್ರಾಮಗಳಲ್ಲಿರುವ ಬುಡಕಟ್ಟು ಸಮುದಾಯಗಳ ಜನರ ಜೀವನಮಟ್ಟವನ್ನು ಸುಧಾರಿಸುವ ಮತ್ತು ಅವರ ಸಮಗ್ರ ಅಭಿವೃದ್ದಿಗಾಗಿ ಅಲ್ಲಿನ ಜನರ ಸಹಭಾಗಿತ್ವದೊಂದಿಗೆ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿ ಎಲ್ಲಾ ಇಲಾಖೆಗಳು ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದರು.
ಬುಡಕಟ್ಟು ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳು, ಅಲ್ಲಿನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು, ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗವಕಾಶಗಳನ್ನು ಒದಗಿಸುವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಅವರಿಗೆ ತಲುಪಿಸುವ ಮೂಲಕ ಬುಡಕಟ್ಟು ಜನರ ಸರ್ವಾಂಗೀಣ ಅಭಿವೃಧ್ದಿಗೆ ಪಣತೊಡಬೇಕು, ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಗ್ರಾಮಗಳ ವ್ಯಾಪ್ತಿಯಲ್ಲಿನ ಜನತೆ, ಸಂಘ ಸಂಸ್ಥೆಗಳು, ಸ್ವ ಸಹಾಯ ಸಂಘಗಳು ಸಹಯೋಗದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳು, ಗ್ರಾಮ ಪಂಚಾಯತ್ ಗಳು ಮತ್ತು ಬ್ಲಾಕ್ ಮಟ್ಟದಲ್ಲಿ ಅಧಿಕಾರಿಗಳಿಗೆ ಮಾಸ್ಟರ್ ಟ್ರೃನರ್ ಗಳಿಂದ ತರಬೇತಿ ನೀಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಈ ಅಭಿಯಾನವನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ಕ್ರಿಮ್ಸ್ ನ ನಿರ್ದೇಶಕಿ ಡಾ.ಪೂರ್ಣಿಮಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೈ.ಕೆ.ಉಮೇಶ್, ಜಿಲ್ಲಾ ಮಾಸ್ಟರ್ ಟ್ರೈನರ್ ಗಳಾದ ನಾರಾಯಣ ಭಾಗವತ್, ಕುಮಾರ್, ಅಶೋಕ್ ಪವಾರ್, ರಂಗಪ್ಪ, ಕಿರಣ್ ಮನ್ವಾಚಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 