ಜನರ ಅಪೇಕ್ಷೆಯಂತೆ ಕೆಲಸವಾಗಬೇಕು - ಬೇಡಿಕೆ ಕೆಲಸಗಳಿಗೆ ಆದ್ಯತೆ ನೀಡಲು ಸೂಚನೆ
Work should be done as per people's wishes - Instructions to prioritize demanding work
ಜನರ ಅಪೇಕ್ಷೆಯಂತೆ ಕೆಲಸವಾಗಬೇಕು - ಬೇಡಿಕೆ ಕೆಲಸಗಳಿಗೆ ಆದ್ಯತೆ ನೀಡಲು ಸೂಚನೆ
ಹಾವೇರಿ 29: ಜನರ ಅಪೇಕ್ಷೆಯಂತೆ ಕೆಲಸವಾಗಬೇಕು ಹಾಗೂ ಅವರ ಬೇಡಿಕೆ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ 2026-27ನೇ ಸಾಲಿನ ವಾರ್ಷಿಕ ಜಿಲ್ಲಾ ಕರಡು ಯೋಜನೆಯ ಪ್ರಗತಿ ಪರೀಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಪಾಲ್ಗೊಳ್ಳುವರಿಕೆಯಲ್ಲಿ ಕ್ರಿಯಾಯೋಜನೆ ರೂಪಿಸಬೇಕು. ಕಾನೂನು ಪ್ರಕಾರ ಯೋಜನೆಗಳ ಅನುಷ್ಠಾನ ಮಾಡಬೇಕು ಎಂದು ಸಲಹೆ ನೀಡಿದರು.
ವಾರ್ಡ್‌ವಾರು ಸಭೆ: ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್‌ವಾರು ಸಭೆಮಾಡಬೇಕು. ಆ ಸಭೆಗಳಲ್ಲಿ ಜನರ ಬೇಡಿಕೆ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕು, ತಳ ಹಂತದಿಂದಲೇ ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವಾಗಬೇಕು. ಸಮಾಜದ ಅಭಿವೃದ್ಧಿಯಾದರೆ ನಿಜವಾದ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿ ಬಂದಹಾಗೆ. ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಯೋಜನೆಗಳ ಸಮರ್ಕ ಅನುಷ್ಠಾನದ ಮೂಲಕ ಹಳೆಯ ಅಖಂಡ ಧಾರವಾಡ ಜಿಲ್ಲೆಯಲ್ಲಿ ಬದಲಾವಣೆ ತರುವ ಮೂಲಕ ಮುಂಚೂಣಿಯಲ್ಲಿರಬೇಕು ಎಂದು ನಿರ್ದೇಶನ ನೀಡಿದರು.
ಸ್ಮಶಾನಕ್ಕೆ ಹಾಗೂ ಹೊಲಕ್ಕೆ ದಾರಿಗೆ ಆದ್ಯತೆ ನೀಡಿ: ಇಂದಿಗೂ ಎಷ್ಟೋ ಗ್ರಾಮಗಳಲ್ಲಿ ಸ್ಮಶಾನ ಇಲ್ಲ ಹಾಗೂ ರೈತರಿಗೆ ಹೊಲಗಳಿಂದ ಗ್ರಾಮಕ್ಕೆ ಬರಲು ದಾರಿಗಳಿಲ್ಲ. ಕ್ರಿಯಾಯೋಜನೆ ತಯಾರಿಸುವಾಗ ಇಂತಹ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾಯೋಜನೆ ರೂಪಿಸಬೇಕು ಹಾಗೂ ಸ್ಮಶಾನಕ್ಕೆ ಜಾಗ ಹಾಗೂ ಹೊಲಕ್ಕೆ ರಸ್ತೆ ನಿರ್ಮಾಣಕ್ಕೆ ಮೊದಲು ಆದ್ಯತೆ ನೀಡಿ ಎಂದರು.
ಪ್ರೀತಿ-ಗೌರದಿಂದ ನಡೆದುಕೊಳ್ಳಿ: ಕೃಷಿ, ತೋಟಗಾರಿಕೆ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿ. ಎಲ್ಲ ಯೋಜನೆಗಳು ಎಲ್ಲರಿಗೂ ದೊರೆಯುವಂತಾಬೇಕು. ಜನರ ಬದುಕಿನಲ್ಲಿ ಬದಲಾವಣೆ ತರುವ ಸುವರ್ಣಾವಕಾಶ ದೊರೆತಿದೆ, ಅದನ್ನು ಸದುಪಯೋಗಮಾಡಿಕೊಳ್ಳಿ, ಸಾರ್ವಜನಿಕರೊಂದಿಗೆ ಪ್ರೀತಿ-ಗೌರವದಿಂದ ನಡೆದುಕೊಳ್ಳಬೇಕು. ಜನರ ಅಭಿಲಾಸೆಯಂತೆ ಕ್ರಿಯಾಯೋಜನೆಗಳನ್ನು ರೂಪಿಸಿ ಕೆಲಸಮಾಡಿದರೆ ಜನರು ನಿಮ್ಮನ್ನು ಸಾಯೋವರೆಗೂ ಮರೆಯೋದಿಲ್ಲ ಎಂದರು.
ಗ್ರಾಮ ಸ್ವರಾಜ್ಯ ವ್ಯವಸ್ಥೆ: ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ನಗರ ಸಂಸ್ಥೆಗಳ ಒಂದು ವಾರ್ಡ್‌ನ್ನು ಗಾಂಧೀಜಿ ಅವರ ಕನಸಿನ ಗ್ರಾಮ ಸ್ವರಾಜ್ಯ ವ್ಯವಸ್ಥೆ ಜಾರಿಗೆ ಮುಂಬರುವ ನವಂಬರ್ 14ರೊಳಗಾಗಿ ಮಾಹಿತಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಸಭೆ: ಜನರ ಪಾಲ್ಗೊಳ್ಳುವಿಕೆಯಲ್ಲಿ ತಯಾರಿಸಿದ ಕ್ರಿಯಾಯೋಜನೆ ಮಾಹಿತಿಯನ್ನು ನ.14ರೊಳಗಾಗಿ ಸಲ್ಲಿಸಿದರೆ, ನ.14 ಅಥವಾ ನ.15 ರಂದು ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ಥಳೀಯ ನಗರ ಸಂಸ್ಥೆಯ ಮುಖ್ಯಾಧಿಕಾರಿಗಳ ಸಭೆ ನಡೆಸಲಾಗುವುದು. ಹಾವೇರಿ ಸ್ವಾತಂತ್ರ್ಯ ಹೋರಾಟಗಾರರ ಜಿಲ್ಲೆ, ಸರ್ಕಾರದ ಯೋಜನೆಗಳನ್ನು ಶಿಸ್ತುಬದ್ಧವಾಗಿ ಅನುಷ್ಠಾನಮಾಡುವ ಮೂಲಕ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಬೇಕು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಹಾಗೂ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಅವರು ಮಾತನಾಡಿ, ಸ್ಮಶಾನಕ್ಕೆ ಜಾಗೆ ಗುರುತಿಸಲು ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು-ಜನ ಪ್ರತಿನಿಧಿಗಳು ಒಟ್ಟಾಗಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ನ.14 ರೊಳಗಾಗಿ ನಗರದ ಒಂದು ವಾರ್ಡ್ ಹಾಗೂ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತಿಗೆ ಸರ್ಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಮಾದರಿ ಜಿಲ್ಲೆ ಮಾಡಲು ಎಲ್ಲರೂ ಶ್ರಮಿಶೋಣ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಪುನಿತ್ ಹಾಗೂ ಜಿ.ಪಂ.ಯೋಜನಾ ನಿರ್ದೇ ಶಕ ಎಚ್.ವೈ.ಮೀಶೆ ಅವರು ಮಾತನಾಡಿ, 2026-27ನೇ ಸಾಲಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಯೋಜನೆಗಳನ್ನು ಕೆಳಹಂತದಿಂದ ಅಂದರೆ, ಜನವಸತಿ, ಗ್ರಾಮ ಸಭೆ, ವಾರ್ಡ್ ಸಭೆ, ಗ್ರಾಮ ಪಂಚಾಯತ್ ಸಭೆಗಳಿಂದ ಜನರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದ ತಯಾರಿಸಿ ಯೋಜನೆಗಳನ್ನು ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಜಿಲ್ಲಾ ಯೋಜನಾ ಸಮಿತಿ ಮೂಲಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ಸಲ್ಲಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ತೋಟಗಾರಿಕೆ, ಕೃಷಿ, ಸಣ್ಣ ನೀರಾವರಿ, ಅರಣ್ಯ ಇಲಾಖೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಯೋಜನೆಗಳ ಮಾಹಿತಿ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 