ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ : ಶಿರಸಿ ಎಸಿ ಕಾವ್ಯರಾಣಿ
Work towards providing basic facilities to the people: Sirsi AC Kavyarani
ಕಂಪ್ಲಿ 21: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಜೊತೆಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಿರಸಿ ಎಸಿ, ಕಂಫ್ಲಿ ತಾಲೂಕು ನೋಡಲ್ ಅಧಿಕಾರಿ ಕಾವ್ಯರಾಣಿ ಕೆ.ವಿ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಮೂರಾ್ನಲ್ಕು ಸಭೆ ಮಾಡಿದ್ದೇವೆ. ಕಂಫ್ಲಿ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಪರೀಶೀಲಿಸಲಾಯಿತು. ಪ್ರತಿಯೊಂದು ನಾಗರಿಕರು ಹಸಿ ಮತ್ತು ಒಣ ಕಸ ವಿಂಗಡಿಸಿ, ಪುರಸಭೆಯ ವಾಹನಕ್ಕೆ ಹಾಕಬೇಕು. ಕಂಪ್ಲಿ ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬಂದಿದೆ. ಆದ್ದರಿಂದ ಈ ಸಲ ಫಲಿತಾಂಶ ಹೆಚ್ಚಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಹೆಚ್ಚುವರಿ ತರಗತಿ, ಮೋಟಿವೇಶನ್ ಸೇರಿದಂತೆ ಇನ್ನಿತರದಲ್ಲಿ ಮಕ್ಕಳ ಕಲಿಕೆ ಹೆಚ್ಚಿಸಿ, ಮುಂದಿನ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಫಲಿತಾಂಶ ತರುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ.
ಆದ್ದರಿಂದ ಕಂಪ್ಲಿ ತಾಲೂಕಿನಲ್ಲಿರುವ 60 ಪೌಢ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಗುರುತಿಸಿ, ಮಕ್ಕಳ ಕಲಿಕೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಸ ಶಿರಸಿಯಲ್ಲಿ ಕೈಗೊಂಡ ರೂಪುರೇಷಗಳನ್ನು ಕಂಪ್ಲಿ ತಾಲೂಕಿನಲ್ಲಿ ಅನುಷ್ಠಾನಕ್ಕೆ ತಂದು, ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ಬದಲಾವಣೆ ತರಲು ನಿರ್ಧರಿಸಲಾಗಿದೆ. ಸೋಮಪ್ಪ ಕೆರೆ ಅಂಗಳದ ಫುಟ್‌ಬಾತ್‌ನಲ್ಲಿ ಮಹಿಳೆಯರು ಸೇರಿದಂತೆ ಅನೇಕ ಜನರು ವಾಯು ವಿವಾರಕ್ಕೆ ಬರುತ್ತಾರೆ. ಆದರೆ, ಇಲ್ಲಿನ ಕೆರೆ ದಡದಲ್ಲಿ ಸ್ವಚ್ಚತೆ ಕಡಿಮೆ ಇರುವುದರಿಂದ ಸ್ವಚ್ಚತಾ ದೃಷ್ಠಿಯಿಂದ ಮುಂದಿನ ದಿನದಲ್ಲಿ ಸಂಬಂಧಿಸಿ ಇಲಾಖೆಗಳ ನೇತೃತ್ವದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಜಾಗೃತಿ ಮೂಡಿಸಲಾಗುವುದು. ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀರೋಗ ತಜ್ಞರ ಅವಶ್ಯಕತೆ ಇರುವುದರಿಂದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಸ್ತ್ರೀರೋಗ ತಜ್ಞರನ್ನು ನೇಮಿಸಲು ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ತಾಪಂ ಇಒ ಆರ್.ಕೆ.ಶ್ರೀಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 