ಆರೋಗ್ಯ ರಕ್ಷಣೆ ಮತ್ತು ಓಷಧೀಯ ವಿಜ್ಞಾನದಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಕಾರ್ಯಾಗಾರ
Workshop on Artificial Intelligence in Healthcare and Pharmaceutical Sciences
ಲೋಕದರ್ಶನ ವರದಿ
ಬೆಳಗಾವಿ 24: ಬೆಳಗಾವಿಯ ಬಸವನಕುಡಚಿಯ ಕೆಎಲ್‌ಇ ಫಾರ್ಮಸಿ ಕಾಲೇಜಿನಲ್ಲಿ ‘ಆರೋಗ್ಯ ರಕ್ಷಣೆ ಮತ್ತು ಓಷಧೀಯ ವಿಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ)’ ವಿಷಯದ ಕುರಿತು ಸಮ್ಮೇಳನದ ಪೂರ್ವಭಾವಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವು ಪ್ರೊ. ಡಾ. ಪ್ರಮೋದ್ ಎಚ್.ಜೆ. ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು. ಪ್ರೊ. ಡಾ. ಎಂ.ಬಿ. ಪಾಟೀಲ ಅವರು ಮುಖ್ಯ ಅತಿಥಿಗಳಾದ ಪದ್ಮಶ್ರೀ ಪ್ರೊ. ಡಾ. ಮದನ್ ಗೋಪಾಲ್ ಅವರನ್ನು ಪರಿಚಯಿಸಿದರು.
ಮುಖ್ಯ ಅತಿಥಿಗಳು ಆರೋಗ್ಯ ರಕ್ಷಣೆ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಪಾತ್ರವನ್ನು ವಿವರಿಸಿದರು. ಎಐ ಮಾನವ ಕೆಲಸದ ಹೊರೆಯನ್ನು ಕಡಿಮೆ ಮಾಡುವುದರ ಜತೆಗೆ ದಕ್ಷತೆ, ವೈಜ್ಞಾನಿಕ ಸಂಶೋಧನೆ ಹಾಗೂ ನಾವೀನ್ಯತೆಯ ವೇಗವನ್ನು ಹೆಚ್ಚಿಸಬಲ್ಲದು ಎಂದು ಹೇಳಿದರು.
ಎಐ ಆಧಾರಿತ ಸಂಶೋಧನಾ ಕಾರ್ಯವಿಧಾನಗಳ ಕುರಿತು ಪ್ರಾಯೋಗಿಕ ಅನುಭವ ಒದಗಿಸುವುದು ಹಾಗೂ ಓಷಧೀಯ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರಗಳಲ್ಲಿ ಅದರ ಅನ್ವಯಿಕೆಗಳ ಪರಿಚಯ ಮಾಡಿಕೊಡುವುದು ಕಾರ್ಯಾಗಾರದ ಉದ್ದೇಶವಾಗಿತ್ತು.
ಡಾ. ಅಂಜನಾ ಅವರು ವಂದನಾರೆ್ಣ ಸಲ್ಲಿಸಿದರು. ಸುಮಾರು ಒಂದು ದಿನ ನಡೆದ ಕಾರ್ಯಾಗಾರವು ಭಾಗವಹಿಸಿದವರ ಅಭಿಪ್ರಾಯ ಸಂಗ್ರಹ ಹಾಗೂ ಪ್ರಮಾಣಪತ್ರ ವಿತರಣೆಯೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 