‘ಇಂಡಸ್ಟ್ರಿ-ಅಕ್ಯಾಡೆಮಿಯಾ ಲಿಂಕೇಜೆ’ ಎಂಬ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟನೆ
Workshop on ‘Industry-Academia Linkage’ inaugurated
ವಿಜಯಪುರ 12: ಕೌಶಲ್ಯ ರಹಿತ ಪದವಿಗಳು ಉದ್ಯೋಗ ವಲಯದಲ್ಲಿ ಯಾವುದೇ ಪ್ರಯೋಜನ ನೀಡಲಾರವು ಎಂದು ಮಾಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಇಂಡಸ್ಟ್ರಿ-ಅಕ್ಯಾಡೆಮಿಯಾ ಲಿಂಕೇಜೆ’ ಎಂಬ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿಗಿಂತಲೂ ಉದ್ಯೋಗ ಪೂರಕ ಕೌಶಲ್ಯಗಳು ಹೆಚ್ಚಿನ ಮಹತ್ವ ಪಡೆದುಕೊಂಡಿರುವುದನ್ನು ಅವರು ಒತ್ತಿಹೇಳಿದರು. ಉದ್ಯೋಗದಾತರ ಆಕಾಂಕ್ಷೆಗಳಿಗೆ ಅನುಗುಣವಾಗಿರುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ವಿದ್ಯಾರ್ಥಿನಿಯರ ಭವಿಷ್ಯಕ್ಕಾಗಿ ಅವಶ್ಯಕ. ಪದವಿ ಹಂತದಲ್ಲಿಯೇ ತಮ್ಮ ವಿಷಯಕ್ಕೆ, ತಮ್ಮ ಆಸಕ್ತಿ ಕ್ಷೇತ್ರಕ್ಕೆ ಮತ್ತು ಉದ್ಯೋಗಾವಕಾಶಗಳಿಗೆ ತಕ್ಕ ಕೌಶಲ್ಯಾಧಾರಿತ ತರಬೇತಿಗಳನ್ನು ಕಲಿಯಬೇಕು ಎಂದು ಸೂಚಿಸಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಎನ್‌ಇಪಿ ಸ್ನಾತಕ ವಿಭಾಗದ ವಿಶೇಷಧಿಕಾರಿ ಪ್ರೊ. ಸಕ್ಪಾಲ ಹೂವಣ್ಣ ಮಾತನಾಡಿ, ಉದ್ಯೋಗಿಕ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ತಮ್ಮ ಪ್ರಾವೀಣ್ಯತೆ ಮತ್ತು ಅನುಭವವನ್ನು ವಿದ್ಯಾರ್ಥಿನಿಯರಿಗೆ ಹಂಚಿಕೊಳ್ಳುವಂತೆ ಕೋರಿದರು. ಸ್ನಾತಕ ಹಂತದಲ್ಲಿರುವ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯ ಆಯೋಜಿಸುತ್ತಿರುವ ಇಂತಹ ಕಾರ್ಯಾಗಾರಗಳ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ಅರ್ಿತಾ ಮಠದ ಹಾಗೂ ಹಜ್ರತ್ ಗೋಠೆ ಅತಿಥಿಯರನ್ನು ಪರಿಚಯಿಸಿದರು.
ಬೆಂಗಳೂರಿನ ಐಆರ್‌ಸಿ ಹಾಗೂ ಟಿಚಿಎಸ್ ಮುಖ್ಯಸ್ಥ ಡಾ. ನಾಗಪ್ಪ. ಬಿ, ವಿವಿಯ ನಿರ್ವಹಣಾ ಶಾಸ್ತ್ರ ಅಧ್ಯಾಯನ ವಿಭಾಗದ ಸಹಾಯಕ ಪ್ರಾಧ್ಯಪಕ ಡಾ. ಚಂದ್ರಶೇಖರ ಮಠಪತಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ಆಯಾಮಗಳ ಕುರಿತು ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಪ್ರಗತಿ ನಂದೂರ ಕಾರ್ಯಕ್ರಮವನ್ನು ನಿರೂಪಿಸಿದರು. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಪ್ರಾಧ್ಯಪಕ ಪ್ರೊ. ಗವಿಸಿದ್ದಪ್ಪ ಎ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 