ತಾಳಿಕೋಟಿ ಪಟ್ಟಣದಲ್ಲಿ ವಿಶ್ವ ಏಡ್ಸ್ ದಿನ ಆಚರಣೆ
World AIDS Day celebrated in Talikoti town
ತಾಳಿಕೋಟಿ 01 ಪಟ್ಟಣದಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟು ಘಟಕ ವಿಜಯಪುರ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಮುದ್ದೇಬಿಹಾಳ, ಎಸ್.ವಿ.ಎಮ್. ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟೆ ಇವರ ಸಂಯೋಗದಲ್ಲಿ ವಿಶ್ವ ಏಡ್ಸ್ ದಿನವನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮುಂಜಾನೆ 10:00 ಗಂಟೆಗೆ ಸಮುದಾಯದ ಆರೋಗ್ಯ ಕೇಂದ್ರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸ್ಥಳೀಯ ಎಸ್.ವಿ.ಎಂ.ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾತಾವನ್ನು ನಡೆಸಲಾಯಿತು.
ಇಂದು ಅವರು ಸುರಕ್ಷಿತ ಲೈಂಗಿಕ ಕ್ರಿಯೆ ಅನುಸರಿಸುತ್ತಿರುವುದರಿಂದ ಎಚ್‌ಐವಿ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು.ಐಸಿಟಿಸಿ ಸಮಾಲೋಚಕಿ ಕಲ್ಪನಾ ಹೂಗಾರ ಪ್ರಾಸ್ತಾವಿಕವಾಗಿ ಮಾತನಾಡಿ ಎಚ್‌ಐವಿ ಸೋಂಕಿನ ನಿಯಂತ್ರಣ ಕ್ರಮಗಳು ಹಾಗೂ ಏಡ್ಸ್ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪು ಕಲ್ಪನೆಗಳ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ,ಎನ್.ಜಿ.ಓ. ವರ್ಕರ್ಸ, ತಾಳಿಕೋಟಿ ಎಸ್ವಿಎಮ್ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 