ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ
World Environment Day celebrated at Ghanamateshwar Educational Institute
ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ
ತಾಳಿಕೋಟೆ 05: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ದಿ.5ರಂದು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಮಾತನಾಡಿ ಇಂದಿನ ದಿನಗಳಲ್ಲಿ ಪ್ರಕೃತಿಯ ಮಹತ್ವ ಹೆಚ್ಚು ಹೆಚ್ಚು ಅರ್ಥವಾಗುತ್ತಿದೆ. ಹಾಗಾಗಿ ನಾವು ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ನಮ್ಮ ಮಕ್ಕಳು ಮುಂದಿನ ಪೀಳಿಗೆಗೆ ಪರಿಸರವನ್ನು ರಕ್ಷಿಸಿಕೊಳ್ಳಬೇಕಾದವರು. ಅವರಿಗೂ ಪರಿಸರದ ಕಾಳಜಿ ಅರ್ಥ ಮಾಡಿಸುವ ಅಗತ್ಯ ಹೆಚ್ಚಿದೆ. ಹಾಗಾಗಿ ಪ್ರತಿ ವರ್ಷ ಈ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ಎಂದರು. ವಿದ್ಯಾರ್ಥಿನಿ ಅದಿತಿ ನಾವು ಜೀವಿಸುತ್ತಿರುವ ಈ ಭೂಮಿ ಹಲವು ಜೀವರಾಶಿಗಳನ್ನು ತನ್ನ ಮಡಿಲಿನಲ್ಲಿರಿಸಿಕೊಂಡು ಸಾಕಿ ಸಲಹುತ್ತಿದೆ. ಪ್ರತಿಯೊಂದು ಜೀವರಾಶಿಗಳಿಗೆ ಆಹಾರ, ಆಶ್ರಯ, ಗಾಳಿ ಮತ್ತು ಬೆಳಕನ್ನು ಒದಗಿಸುತ್ತಾ ಬಂದಿದೆ. ಮಾನವನ ಎಲ್ಲಾ ಅಗತ್ಯಗಳನ್ನು ಪೂರೈಸುತ್ತಲೇ ಇದೆ ಎಂದು ತಿಳಿಸಿದರು. ಶಿಕ್ಷಕ ಮಂಜುನಾಥ ಹಿಪ್ಪರಗಿ ಮಾತನಾಡಿದರು. ಶಾಲೆಯಲ್ಲಿ ಪರಿಸರ ಸರಕ್ಷಣೆಗಾಗಿ ಸಸಿ ನೆಡುವುದರ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾಯ ಬಿ.ಎಸ್ ಮಾಲಿಪಾಟೀಲ್ ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 