ಹೋರ್ತಿ ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Horti Swami Vivekananda School
ಹೋರ್ತಿ ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಇಂಡಿ 07: ತಾಲೂಕಿನ ಹೋರ್ತಿ ಸ್ವಾಮಿ ವಿವೇಕಾನಂದ ಶಾಲೆಯ ಆವರಣದಲ್ಲಿ ಪುಟ್ಟ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಶಾಲೆಯ ಮುಖ್ಯಗುರುಮಾತೆ ಐ ಖ ಕಲಶೆಟ್ಟಿ ಅವರು ನಮ್ಮ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಇದಲ್ಲದೆ, ಮಾನವ ಚಟುವಟಿಕೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟುವುದು ಮತ್ತು ಭೂಮಿಯನ್ನು ರಕ್ಷಿಸುವುದು ಇದರ ಗುರಿಯಾಗಿದೆ. ವಿಶ್ವ ಪರಿಸರ ದಿನವು ಪರಿಸರವನ್ನು ರಕ್ಷಿಸಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಮತ್ತು ವಿವಿಧ ಮಾರ್ಗಗಳನ್ನು ಅಳವಡಿಸಿಕೊಳ್ಳುವುದಕ್ಕೆ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತಿಕ ತಾಪಮಾನ ಏರಿಕೆಯು ಒಂದು ಗಂಭೀರ ಸಮಸ್ಯೆಯಾಗಿದ್ದು, ಪರಿಸರ ಹಾನಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಆದ್ದರಿಂದ, ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಅದೇ ರೀತಿ, ಪ್ಲಾಸ್ಟಿಕ್ ಬಳಕೆಯಂತಹ ನಮ್ಮ ದೈನಂದಿನ ಚಟುವಟಿಕೆಗಳು ವಿವಿಧ ರೀತಿಯ ಮಾಲಿನ್ಯ, ಶೋಷಣೆ ಮತ್ತು ಗ್ರಹದ ವಿನಾಶಕ್ಕೆ ಕಾರಣವಾಗುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಶಿಕ್ಷಕರಾದ ಎ ಒ ಬಿರಾದಾರ, ಎ ಖ ಕಂದಗಲ್, ಖ ಒ ಖೈನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 