ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚಣೆ ಕಾರ್ಯಕ್ರಮ
World Environment Day program at Koppal University
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚಣೆ ಕಾರ್ಯಕ್ರಮ
ಕೊಪ್ಪಳ 05: ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಮಾನವನಿಂದಲೇ ಸರಿಯಾಗಬೇಕಿದೆ ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಪ್ರೊ.ಬಿ.ಕೆ. ರವಿ ತಿಳಿಸಿದರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುತ್ತಿರುವ ಪರಿಸರ ಮತ್ತು ಆರೋಗ್ಯ ಮೇಲೆ ಹೆಚ್ಚು ಪರಿಣಾಮಕಾರಿ,ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಪರಿಸರ ರಕ್ಷಣೆಗೆ ಮೊದಲ ಹೆಜ್ಜೆ, ಬಳಕೆಯನ್ನು ಕಡಿಮೆ ಮಾಡುವ ಶಪಥ ಮಾಡುವ ಮೂಲಕ ಈ ದಿನವನ್ನು ಆಚರಣೆ ಮಾಡೋಣ, ಪ್ಲಾಸ್ಟಿಕ್ ಬಳಕೆಯನ್ನು ತಗ್ಗಿಸದಿದ್ದರೆ ಭವಿಷ್ಯದ ಪೀಳಿಗೆಗೆ ಪರಿಸರ ಉಳಿಯುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 