ಜಿಲ್ಲಾಡಳಿತದಲ್ಲಿ ವಿಶ್ವ ಮಾನವ ದಿನಾಚರಣೆ
ಗದಗ 29: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವ ಮಾನವ ದಿನಾಚರಣೆಯನ್ನು ರವಿವಾರ ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಆಚರಿಸಲಾಯಿತು.ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ ಅವರುಗಳು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ನೆರವೇರಿಸಿ ಗೌರವ ಸಲ್ಲಿಸಿದರು.ದೇಶದ ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನೆಲೆಯಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಬಿ ಮಡ್ಲೂರ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ಮಹೇಶ ಕರಡಿಗುಡ್ಡ, ರಾಜಕುಮಾರ ಸೊಪಡ್ಲ ಸೇರಿದಂತೆ ಮತ್ತಿತರು ಹಾಜರಿದ್ದರು.