ವಿಜಯಪುರ: ಡಿ.10- ಮಾನವನ ಹುಟ್ಟಿನಿಂದಲೇ ನೈಸಗರ್ಿಕವಾಗಿ ಹಕ್ಕುಗಳನ್ನು ಪಡೆದುಕೊಳ್ಳುತ್ತಾನೆ. ಅವುಗಳ ರಕ್ಷಣೆಯ ಉದ್ದೇಶದಿಂದ ಸಂವಿಧಾನಿಕ ಚೌಕಟ್ಟಿನಡಿ ಕಾನೂನುಗಳಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸದಾನಂದ ಎನ್.ನಾಯಕ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿಜಯಪುರ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ರಕ್ಷಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದೆ. ಸಾಂವಿಧಾನಿಕ ಮಾನ್ಯತೆ ನೀಡಿದೆ. ಅವುಗಳ ಉಲ್ಲಂಘನೆಯಾದಾಗ ಕಾನೂನು ನೆರವು ಪಡೆಯಲು ಅವಕಾಶವಿದೆ. ಮಾನವ ತನ್ನ ಇಷ್ಟದಂತೆ ಜೀವಿಸುವ, ಅಭಿಪ್ರಾಯ ವ್ಯಕ್ತಪಡಿಸುವ, ಧರ್ಮ ಅನುಸರಿಸುವ ಸಮಾನತೆ ಸೇರಿದಂತೆ ಇತರೆ ಹಕ್ಕುಗಳ ಉಲ್ಲಂಘನೆಯಾದಾಗ ಅಗತ್ಯ ಕಾನೂನು ನೆರವು ಪಡೆಯಬಹುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೂ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಯಾವುದೇ ಪ್ರಕರಣ ದಾಖಲಾಗದಿರುವುದು ಸಂತಸದ ವಿಷಯ. ಒಬ್ಬ ವ್ಯಕ್ತಿಗೆ ಗೌರವಯುತ ಜೀವನವನ್ನು ಹಕ್ಕುಗಳು ದೊರಕಿಸಿ ಕೊಡುತ್ತವೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ಮಾನವ ಹಕ್ಕುಗಳ ರಕ್ಷಣೆ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಚಚರ್ೆ ನಡೆದ ಸಂದರ್ಭದಲ್ಲಿಯೇ ಭಾರತದ ಸಂವಿಧಾನ ರಚನೆ ಕಾರ್ಯ ನಡೆದಿತ್ತು. ಅದರ ಪರಿಣಾಮ ಭಾರತದ ಸಂವಿಧಾನದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಯಿತು. ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಡಿಮೆ. ಮಾನವ ಹಕ್ಕುಗಳು ಮತ್ತು ಅವುಗಳ ಮಹತ್ವ, ರಕ್ಷಣೆ ಕುರಿತು ಜನರಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆ ಮೂಡಬೇಕು. ಅದರಿಂದ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ಸಹಾಯಕವಾಗುತ್ತದೆ. ದೇಶದ ಕಾನೂನುಗಳ ಜೊತೆ ಜನರ ಸಹಕಾರವೂ ಅವಶ್ಯಕ ಎಂದು ಹೇಳಿದರು.
ಕಾನೂನು ಸಲಹೆಗಾರ ಬಿ.ಎಂ.ನೂಲ್ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 1948ರಿಂದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಆರಂಭವಾಯಿತು. ಇದು 71ನೇಯ ದಿನಾಚರಣೆಯಾಗಿದ್ದು, ನೈಸಗರ್ಿಕವಾಗಿ ದೊರೆತ ಹಕ್ಕುಗಳ ರಕ್ಷಣೆಗೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ ಎಂದು ಹೇಳಿದರು.
ಮಾನವ ಹಕ್ಕುಗಳ ರಕ್ಷಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಮಹೇಶ ಪೋತದಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ಮಮದಾಪುರ ನಿರೂಪಿಸಿದರು. ಮಂಜುಳಾ ಹಿಪ್ಪರಗಿ ಪ್ರಾರ್ಥನೆ ಹಾಗೂ ನಾಡಗೀತೆ ನಡೆಸಿಕೊಟ್ಟರು. ಮಹಾನಗರ ಪಾಲಿಕೆ ಆಯುಕ್ತ ಹಾಗೂ ಪ್ರಭಾರ ಉಪವಿಭಾಗಾಧಿಕಾರಿ ಡಾ.ಔದ್ರಾಮ ವಂದಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಪ್ರಭಾಕರ್ರಾವ್ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.