ವಿಶ್ವ ರೇಬಿಸ್ ದಿನಾಚರಣೆ: ರೇಬಿಸ್ ನಿಯಂತ್ರಣಕ್ಕೆ ಜನಜಾಗೃತಿ ಅಗತ್ಯ

ವಿಶ್ವ ರೇಬಿಸ್ ದಿನಾಚರಣೆ: ರೇಬಿಸ್ ನಿಯಂತ್ರಣಕ್ಕೆ ಜನಜಾಗೃತಿ ಅಗತ್ಯ  World Rabies Day: Public awareness essential for rabies control


ಧಾರವಾಡ 29: ರೇಬಿಸ್ನಂತಹ ಮಾರಣಾಂತಿಕ ಕಾಯಿಲೆ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ ಹೇಳಿದರು.  

ಧಾರವಾಡದ ರಾಯಾಪುರದಲ್ಲಿರುವ ಕರ್ನಾಟಕ ಹಾಲು ಮಹಾಮಂಡಳಿ ತರಬೇತಿ ಕೇಂದ್ರದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಧಾರವಾಡ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ತಾಂತ್ರಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.  

ರೇಬಿಸ್ ನಿಯಂತ್ರಣಕ್ಕೆ ಸರ್ಕಾರದ ವಿವಿಧ ಇಲಾಖೆಗಳು, ಪಶುವೈದ್ಯರು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನಾಯಿ ಕಡಿತದಿಂದ ಉಂಟಾಗುವ ರೇಬಿಸ್ ತಡೆಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.