ಆರಾಧನೆಯಿಂದ ಜೀವನದಲ್ಲಿ ಸುಖ-ಸಂಪತ್ತು ಪಡೆದು ಸಶಕ್ತರಾಗಬೇಕು-ಪೂಜಾ
Worship should bring happiness and wealth in life and empower us - Pooja
ಆರಾಧನೆಯಿಂದ ಜೀವನದಲ್ಲಿ ಸುಖ-ಸಂಪತ್ತು ಪಡೆದು ಸಶಕ್ತರಾಗಬೇಕು-ಪೂಜಾ
ಗದಗ 24: ಪರಶಿವನ ಅರ್ಧಾಂಗಿಯಾದ ಪಾರ್ವತಿದೇವಿಯನ್ನು ಶಕ್ತಿ ರೂಪದಲ್ಲಿ ನಾವೆಲ್ಲರೂ ಆರಾಧಿಸುವುದರಿಂದ ನಮ್ಮ ಮನೋಕಾಮನೆಗಳು ನೆರವೇರುತ್ತವೆ. ಸುಖ, ಶಾಂತಿ, ಧೈರ್ಯ, ನೆಮ್ಮದಿ, ಸಂಪತ್ತು ನಮ್ಮದಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಶುಭ್ ಜುವೆಲ್ಲರ್ಸ್ ಮಾಲೀಕರಾದ ಪೂಜಾ ಕಿರಣ ಭೂಮಾ ಹೇಳಿದರು.
ಅಖಂಡ ಭಾರತದಾದ್ಯಂತ ಶಕ್ತಿಯ ಆರಾಧನೆಯ ಪ್ರಾರಂಭದ ನಿಮಿತ್ತ ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ 45ನೇ ವರ್ಷದ ದಸರಾ ಮಹೋತ್ಸವ, ಘಟಸ್ಥಾಪನೆ ಮತ್ತು ಶ್ರೀದೇವಿ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸುರರನ್ನು ಸಂಹರಿಸಿದ ಶಕ್ತಿ ಸ್ವರೂಪಿಣಿಯೇ ದುರ್ಗಾದೇವಿ. ನವರಾತ್ರಿಯ ಒಂಬತ್ತು ದಿನಗಳಲ್ಲಿ ನವದುರ್ಗೆಯರನ್ನು ಒಂದೊಂದು ಅವತಾರದಲ್ಲಿ ಪೂಜಿಸುವ ಮೂಲಕ ನವರಾತ್ರಿ ಹಾಗೂ ದಸರಾ ಹಬ್ಬಗಳನ್ನು ಶಾಂತಿ ಮತ್ತು ಸಂಭ್ರಮದಿಂದ ಆಚರಿಸಿ, ಶ್ರೀದೇವಿ ಹಾಗೂ ಭಗವಂತನ ಅನುಗ್ರಹ ಪಡೆದು ಪಾವನರಾಗೋಣ ಎಂದು ಪೂಜಾ ಭೂಮಾ ಹೇಳಿದರು.
ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಮಾತನಾಡಿ, ಶ್ರೀಮಠದಲ್ಲಿ ಜರುಗುವ ದೇವಿ ಪುರಾಣ ಪ್ರವಚನ ಆಲಿಸಿ ಹರ-ಗುರು-ಚರಮೂರ್ತಿಗಳ ಆಶೀರ್ವಚನ ಕೇಳಿ ಜೀವನ ಪಾವನ ಮಾಡಿಕೊಳಳಬೇಕು ಎಂದು ಕರೆ ನೀಡಿದರು. ಶ್ರೀಅನ್ನಪೂರ್ಣೇಶ್ವರ ಸನ್ನಿಧಿಯಲ್ಲಿ ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಪುರಾಣ ಪ್ರವಚನ ನಡೆಯಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಪಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.
ದತ್ತಾ ಪ್ರಾಪರ್ಟಿಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿರಣ ಪ್ರಕಾಶ ಭೂಮಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ, ಭಾಗ್ಯಶ್ರೀ ಕುರಡಗಿ, ಗಂಗಾಧರ ಗಡ್ಡಿ, ಭಾಗ್ಯಶ್ರೀ ಗಡ್ಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ಲಲಿತಾ ಅಸೂಟಿ, ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಎಸ್.ಪಿ. ಸಂಶಿಮಠ, ಅಧ್ಯಕ್ಷರಾದ ಸದಾಶಿವಯ್ಯ ಮದರಿಮಠ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ, ಪೂಜಾ ಸಮಿತಿ ಅಧ್ಯಕ್ಷರಾದ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 