ಯಡೂರ ಮಹೋತ್ಸವ: ಭಕ್ತಿಭಾವದ ಜೊತೆಗೆ ವ್ಯಾಪಾರ ವಹಿವಾಟು ಹೆಚ್ಚಳ
Yadoor Mahotsav: Along with devotion, business transactions increase
ಲೋಕದರ್ಶನ ವರದಿ
ಮಾಂಜರಿ 09: ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಹಾಗೂ ್ಘ್ಲೂ್ಣೂಳಿೂಹ್ಕ್ಡ್ಣ್ಘ್ಣ್ಟ್ಲಿಳ್ಲ್ಘಿ ರಾಜ್ಯಗಳ ಭಕ್ತರ ಶೃದ್ಧಾ ಮತ್ತು ಭಕ್ತಿಯ ಕೇಂದ್ರವಾಗಿರುವ ಚಿಕ್ಕೋಡಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಡೂರದಲ್ಲಿ ಮಾರ್ಚ್ 1 ರಿಂದ 6 ರವರೆಗೆ ನಡೆದ ಮಹಾಕುಂಭಮೇಳ, ರಾಜಗೋಪುರ ಲೋಕಾರೆ್ಣ ಹಾಗೂ ಭವ್ಯ ಕೃಷ್ಣಾ ಆರತಿ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಆಗಮಿಸಿ ಭಾರೀ ಪ್ರತಿಕ್ರಿಯೆ ನೀಡಿದರು. ಈ ಅವಧಿಯಲ್ಲಿ ಪ್ರತಿದಿನವೂ ಸಾವಿರಾರು ಭಕ್ತರು ಆಗಮಿಸಿದ್ದರಿಂದ ಗ್ರಾಮದಲ್ಲಿ ಭಕ್ತಿಮಯ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯ ವ್ಯಾಪಾರಿಗಳಲ್ಲಿಯೂ ದೊಡ್ಡ ಪ್ರಮಾಣದ ಆರ್ಥಿಕ ಚಟುವಟಿಕೆ ಕಂಡುಬಂದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಈ ಧಾರ್ಮಿಕ ಮಹೋತ್ಸವದ ಅಂಗವಾಗಿ ವಿವಿಧ ಪೂಜೆ, ಅಭಿಷೇಕ, ಪ್ರವಚನಗಳು ಸೇರಿದಂತೆ ಅನೇಕ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಜೊತೆಗೆ ಕೃಷ್ಣಾ ನದೀತೀರದಲ್ಲಿ ಭವ್ಯ ಕೃಷ್ಣಾ ಆರತಿ ಕಾರ್ಯಕ್ರಮವೂ ಆಯೋಜಿಸಲಾಗಿತ್ತು. ವಿಶೇಷವಾಗಿ ರಾಜಗೋಪುರ ಲೋಕಾರ್ಣ ಮತ್ತು ಕುಂಭಮೇಳದ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಯಡೂರಕ್ಕೆ ಆಗಮಿಸಿದ್ದರು. ದೇವಾಲಯದ ಆವರಣ, ನದಿ ಘಾಟ್ ಹಾಗೂ ಗ್ರಾಮದ ಪ್ರಮುಖ ರಸ್ತೆಗಳು ಭಕ್ತರ ಭಾರೀ ಜನಸಂದಣಿಯಿಂದ ಕಿಕ್ಕಿರಿದು ಕಂಡುಬಂದವು.
ಈ ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಜಗದ್ಗುರು ಶ್ರೀ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಕಾಶಿ ಪೀಠದ ಜ್ಯೇಷ್ಠ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ನೂತನ ಕಾಶಿ ಪೀಠದ ಜಗದ್ಗುರು ಮಲ್ಲಿಕಾರ್ಜುನ ವಿಶ್ವರಾಧ್ಯ ಮಹಾಸ್ವಾಮೀಜಿ ಹಾಗೂ ಉಜ್ಜಯಿನಿ ಪೀಠದ ರಾಜಗುರು ಸಿದ್ದಲಿಂಗರಾಜ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಅವರು ಭಕ್ತರಿಗೆ ಸಂದೇಶ ನೀಡುತ್ತಾ, “ಧಾರ್ಮಿಕ ಪರಂಪರೆ ಮತ್ತು ಆಧ್ಯಾತ್ಮಿಕ ಸಂಸ್ಕಾರಗಳನ್ನು ಉಳಿಸಿ ಬೆಳೆಸಲು ಇಂತಹ ಮಹೋತ್ಸವಗಳು ಅತ್ಯಂತ ಮಹತ್ವವುಳ್ಳವು. ಇವು ಸಮಾಜದಲ್ಲಿ ಏಕತೆ ಹಾಗೂ ಭಕ್ತಿಭಾವವನ್ನು ಹೆಚ್ಚಿಸುವ ಕಾರ್ಯ ಮಾಡುತ್ತವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಮಾತನಾಡಿ, “ಯಡೂರ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿರುವ ಕ್ಷೇತ್ರವಾಗಿದೆ. ಕುಂಭಮೇಳ ಮತ್ತು ರಾಜಗೋಪುರ ಲೋಕಾರ್ಣದಂತಹ ಕಾರ್ಯಕ್ರಮಗಳು ಈ ಪ್ರದೇಶದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿವೆ” ಎಂದು ಹೇಳಿದರು.
ಶ್ರೀಶೈಲ ಪೀಠದ ಜಗದ್ಗುರು ಹಾಗೂ ಯಡೂರದ ಕಾಡಸಿದ್ದೇಶ್ವರ ಸಂಸ್ಥಾನ ್ಕರಹ್ಝ್ಥ್ಘಿೌ್ಲ್ಘು ದೇವಸ್ತಾನದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಸಿದ್ದರಾಮ ಪಂಡಿತಾರಾಧ್ಯ ರಾಜೆ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಮಾತನಾಡಿ, “ಭಕ್ತರ ಸಹಕಾರದೊಂದಿಗೆ ವಿಶೇಷವಾಗಿ ಮಾಜಿ ಸಂಸದರು, ಮಾಜಿ ಸಚಿವರು ಹಾಗೂ ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರಕಾಶ ಹುಕ್ಕೇರಿ, ಸ್ತ್ಲೂ್ಯೂಳ್ತಹ್ಠಿ್ಛುಷ್ಣ ಕ್ಷೇತ್ರದ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಪದ್ಮಶ್ರೀ ಡಾ. ಪ್ರಭಾಕರ ಕೋರೆ, ಸುತ್ತಮುತ್ತಲಿನ ಸಕ್ಕರೆ ಕಾರ್ಖಾನೆಗಳು ಹಾಗೂ ಅನೇಕ ಗಣ್ಯರ ಸಹಕಾರದಿಂದ ಈ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನೆರವೇರಿದೆ. ಯಡೂರ ಕ್ಷೇತ್ರದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿಯೂ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದರು.
ಭಕ್ತರ ಭಾರಿ ಸಂಖ್ಯೆಯಿಂದ ಹಣ್ಣು, ಹೂವು, ಪ್ರಸಾದ, ಊಟದ ವ್ಯವಸ್ಥೆ, ಹೋಟೆಲ್ ಹಾಗೂ ಇತರ ವಸ್ತುಗಳ ಮಾರಾಟದಲ್ಲಿಯೂ ಹೆಚ್ಚಳ ಕಂಡುಬಂದಿದೆ. “ಆರು ದಿನಗಳಲ್ಲಿ ದೊಡ್ಡ ಪ್ರಮಾಣದ ವ್ಯಾಪಾರ ನಡೆದಿದ್ದು, ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಲಾಭ ದೊರೆತಿದೆ” ಎಂದು ವ್ಯಾಪಾರಿಗಳು ಮಾಹಿತಿ ನೀಡಿದರು. ಒಟ್ಟಾರೆ ಈ ಭವ್ಯ ಧಾರ್ಮಿಕ ಮಹೋತ್ಸವದಿಂದ ಯಡೂರ ಗ್ರಾಮದಲ್ಲಿ ಭಕ್ತಿಮಯ ವಾತಾವರಣ ನಿರ್ಮಾಣವಾಗಿದ್ದು, ಧಾರ್ಮಿಕ ಹಾಗೂ ಆರ್ಥಿಕ ದೃಷ್ಟಿಯಿಂದ ಈ ಕಾರ್ಯಕ್ರಮ ಮಹತ್ವದ ಸ್ಥಾನ ಪಡೆದಿದೆ. ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಇಂತಹ ಐತಿಹಾಸಿಕ ಮಹೋತ್ಸವ ನಡೆದಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 