ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
Yajna Paveeta Dharana program by Havyaka Welfare Development Association
ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
ಬೆಳಗಾವಿ 10: ಇಲ್ಲಿನ ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ ನಡೆಯಿತು.ಕೃಷ್ಣ ದೇವರಾಯ ವೃತ್ತದ ಗೀತ ಗಂಗಾ ಕಟ್ಟಡದಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ವಿ.ಎನ್.ಹೆಗಡೆ ಉದ್ಘಾಟಿಸಿದರು. ಹವ್ಯಕ ಬ್ರಾಹ್ಮಣ ಸಮಾಜದ ಪುರುಷರು ಜನಿವಾರ ಧರಿಸಿದರು. ಇದೇ ವೇಳೆ ಮಹಿಳೆಯರಿಗೆ ರಂಗವಲ್ಲಿ ಸ್ಫರ್ಧೆ ಸಹ ನಡೆಯಿತು. ನಂತರ ಸಂಘದ ವಾರ್ಷಿಕ ಸರ್ವಸಾಮಾನ್ಯ ಸಭೆ ನಡೆಸಲಾಯಿತು. ಹೊಸ ಸದಸ್ಯರನ್ನು ಪರಿಚಯಿಸಲಾಯಿತು. ಎ.ಕೆ.ಭಟ್ ಭಾರತ ಮಾತೆಗೆ ಪೂಜೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನಾ ಶ್ಲೋಕ ಪಠಿಸಲಾಯಿತು. ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.ಉಪಾಧ್ಯಕ್ಷ ಗಣೇಶ ಹೆಗಡೆ, ಕಾರ್ಯದರ್ಶಿ ಸಿ.ಜಿ. ಶಾಸ್ತ್ರಿ, ಖಜಾಂಚಿ ಸೀತಾರಾಮ ಭಾಗ್ವತ, ಕಾರ್ಯಕಾರಿಣಿ ಸದಸ್ಯರಾದ ಎಂ.ಕೆ.ಹೆಗಡೆ, ವಿದ್ಯಾ ಹೆಗಡೆ, ವಸುಮತಿ ಹೆಗಡೆ ಮೊದಲಾದವರು ಇದ್ದರು.ಪರಮೇಶ್ವರ ಹೆಗಡೆ ಸ್ವಾಗತಿಸಿದರು. ಸಂಘದ ಅಧ್ಯಕ್ಷೆ ಪೂರ್ಣಿಮಾ ಹೆಗಡೆ ಪ್ರಸ್ತಾವಿಕ ಮಾತನಾಡಿದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 