ಯಾಸೀರಖಾನ ಪಠಾಣ ಪ್ರಮಾಣ ವಚನ ಸ್ವೀಕಾರ

Yasir Khan Pathana taking oath

ಯಾಸೀರಖಾನ ಪಠಾಣ ಪ್ರಮಾಣ ವಚನ ಸ್ವೀಕಾರ 

ಶಿಗ್ಗಾವಿ 09:ಇತ್ತೀಚೆಗೆ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಸದಸ್ಯರು ಬೆಳಗಾವಿ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದರು. ಶಿಗ್ಗಾವಿ ಕ್ಷೇತ್ರದಿಂದ ಆಯ್ಕೆಯಾದ ಪಠಾಣ ಯಾಶೀರ ಅಹ್ಮದಖಾನ ತಂದೆ ತಾಯಿ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಸಭಾದ್ಯಕ್ಷ ಯು.ಟಿ.ಖಾದರ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಗೃಹ ಸಚಿವ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ಸಚಿವರು, ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹಗೂ ಹಿರಿಯ ಸದಸ್ಯರ ಆಸನಗಳ ಬಳಿ ತೆರಳಿ ನೂತನ ಶಾಸಕರು ಕೃತಜ್ಞತೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಶಿಗ್ಗಾವಿ, ಸವಣೂರ, ಬಂಕಾಪೂರ ಪುರಸಭೆ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.