ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಪ್ರಶಸ್ತಿ ಪಡೆದ ಯೋಗ ಗುರು ರಾಘವೇಂದ್ರ ನೀಲನ್ನವರ
ರನ್ನ ಬೆಳಗಲಿ 27: ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ದಂದು ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟೆ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರಗಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 23 ಜನ ಸಾಧಕರಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಬೆಳಗಲಿ ಪಟ್ಟಣದ ಯೋಗ ಗುರುಗಳಾದ ರಾಘವೇಂದ್ರ ನೀಲಣ್ಣವರ ಅವರು "ಯೋಗ ಕ್ಷೇತ್ರ"ದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ "2025ನೇ ಗಣರಾಜ್ಯೋತ್ಸವ ಪ್ರಶಸ್ತಿ"ಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ, ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರ, ಶಾಸಕರಾದ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಪಿ. ಎಚ್ ಪೂಜಾರ, ಹನಮಂತ ಆರ್ ನಿರಾಣಿ, ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಕೆ. ಭಾಂಡಗೆ, ಜಿಲ್ಲಾಧಿಕಾರಿಗಳಾದ ಕೆ. ಎಮ್.ಜಾನಕಿ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ ಕುರೇರ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಮರನಾಥ ರೆಡ್ಡಿ ವಾಯ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಜೈನಾಪುರ ಈ ಎಲ್ಲಾ ಮಹನೀಯರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿ ಸನ್ಮಾನಿಸಿ, ಅಭಿನಂದಿಸಿದ್ದಾರೆ.