ಯೋಗ ಮಾನವ ಬದುಕಿನ ಸಮಗ್ರ ಭಾಗ
ನವದೆಹಲಿ 5(ಯುಎನ್ಐ): 'ಯೋಗ' ಮಾನವ ಜೀವನದ ಸಮಗ್ರ ಭಾಗವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಇದೇ 21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ತಾವು ತ್ರಿಕೋನಾಸನ ಮಾಡುತ್ತಿರುವ ಅನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಯೋಗದ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ಅವರು ಕಳದೆ ವರ್ಷವೂ ಸಹ ಇದೇ ರೀತಿ ಯೋಗ ಮಾಡುವ ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಜನರಲ್ಲಿ ಅರಿವು ಮೂಡಿಸಿದ್ದರು.
ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಸಮಾರಂಭ ರಾಂಚಿಯಲ್ಲಿ ನಡೆಯಲಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.
ಇದಕ್ಕೂ ಮೊದಲು ಕೇಂದ್ರ ಆಯುಷ್ ಇಲಾಖೆ ದೆಹಲಿ, ಶಿಮ್ಲಾ, ಅಹಮದಾಬಾದ್, ಮೈಸೂರು ಮತ್ತು ರಾಂಚಿ ಈಐದು ನಗರಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಇದರಲ್ಲಿ ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡುವ ಅವಕಾಶವನ್ನು ಪ್ರಧಾನಿ ಕಾಯರ್ಾಲಯಕ್ಕೆ ನೀಡಿತ್ತು. ಅವರ ಪ್ರಯತ್ನದ ಫಲದಿಂದಲೇ ವಿಶ್ವಸಂಸ್ಥೆ ಪ್ರತಿ ವರ್ಷ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿದೆ. ಭಾರತ ಮಾತ್ರವಲ್ಲದೆ ವಿಶ್ವದ 135 ಹೆಚ್ಚು ರಾಷ್ಟ್ರಗಳು ಈ ದಿನವನ್ನು ಯೋಗ ದಿನವೆಂದು ಆಚರಿಸಿಕೊಂಡು ಬರುತ್ತಿವೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 