ವೈಜ್ಞಾನಿಕ ಸಾಧನೆಗೆ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ
Young Scientist Award presented for scientific achievement
ಲೋಕದರ್ಶನ ವರದಿ
ಧಾರವಾಡ, ಜು. 4: ಹಿರಿಯ ವಿಜ್ಞಾನಿ ಡಾ. ಎಸ್.ಟಿ. ನಂದಿಬೇವೂರು ಅವರ ವೈಜ್ಞಾನಿಕ ಸಾಧನೆಗಳು ಇಂದಿನ ಯುವ ವಿಜ್ಞಾನಿಗಳಿಗೆ ಸ್ಫೂರ್ತಿದಾಯಕವಾಗಿವೆ ಎಂದು ಗ್ರಂಥಾಲಯ ವಿಜ್ಞಾನದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಸ್.ಎಲ್. ಸಂಗಮ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಡಾ. ಶರಣಪ್ಪ ತೋಟಪ್ಪ ನಂದಿಬೇವೂರು ದತ್ತಿ ಅಂಗವಾಗಿ ಆಯೋಜಿಸಿದ್ದ ‘ಯುವ ವಿಜ್ಞಾನಿ 2026' ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಡಾ. ನಂದಿಬೇವೂರು ಅವರು ಕರ್ನಾಟಕ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಇಲಾಖೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸೇವಾವಧಿಯಲ್ಲಿ ಅವರು ಅರವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಹಾಗೂ ಎಂ.ಫಿಲ್. ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ 500ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ವಿವಿಧ ರಾಷ್ಟ್ರಗಳ ಆಹ್ವಾನದ ಮೇರೆಗೆ ವಿದೇಶಗಳಲ್ಲಿ ನಡೆದ ವೈಜ್ಞಾನಿಕ ಸಮ್ಮೇಳನಗಳಲ್ಲಿ ಭಾಗವಹಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ನಿವೃತ್ತಿಯ ನಂತರವೂ ಸಂಶೋಧಕರಿಗೆ ಮಾರ್ಗದರ್ಶನ ನೀಡುತ್ತಿದ್ದು, ಅವರ ಸಾಧನೆಗೆ ಪತ್ನಿ ಅರುಣಾ ನಂದಿಬೇವೂರು ಅವರ ಸಹಕಾರವೂ ಅಪಾರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ 2026ನೇ ಸಾಲಿನ ‘ಯುವ ವಿಜ್ಞಾನಿ ಪ್ರಶಸ್ತಿ’**ಯನ್ನು ಕು. ಸುಷ್ಮಿತಾ ರಾಯವಗೋಳ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಈ ಗೌರವವು ತಮ್ಮ ಮುಂದಿನ ಸಂಶೋಧನಾ ಪಯಣಕ್ಕೆ ಮತ್ತಷ್ಟು ಪ್ರೇರಣೆ ನೀಡಿದ್ದು, ಶ್ರದ್ಧೆ, ಬದ್ಧತೆ ಮತ್ತು ಪ್ರಾಮಾಣಿಕತೆಯೇ ಯಶಸ್ಸಿನ ಮೂಲ ಎಂದು ಹೇಳಿದರು. ತಮ್ಮ ಸಾಧನೆಗೆ ಬೆಂಬಲ ನೀಡಿದ ಗುರುಗಳು, ಪೋಷಕರು ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ವಹಿಸಿದ್ದರು. ವೇದಿಕೆಯಲ್ಲಿ ಡಾ. ಎಸ್.ಟಿ. ನಂದಿಬೇವೂರು ಅವರ ಸಾಧನೆಯನ್ನು ಪರಿಚಯಿಸಲಾಯಿತು. ಅರುಣಾ ನಂದಿಬೇವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಕುಂಬಿ ಸ್ವಾಗತಿಸಿದರು. ವಿಶ್ವೇಶ್ವರಿ ಹಿರೇಮಠ ಕಾರ್ಯಕ್ರಮ ನಿರೂಪಿಸಿ, ಡಾ. ಜಿನದತ್ತ ಹಡಗಲಿ ವಂದಿಸಿದರು.
ಕಾರ್ಯಕ್ರಮದಲ್ಲಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಜಯಲಕ್ಷ್ಮೀ ಬಮಚಗಿ, ರತ್ನಾ ಚೌಶೆಟ್ಟಿ, ಗುರು ಕಲ್ಮಠ ಸೇರಿದಂತೆ ನಂದಿಬೇವೂರು ಅವರ ಅಭಿಮಾನಿಗಳು, ಕುಟುಂಬದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 