ಗದಗ 3: ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿನ 18 ವರ್ಷ ಪೂರ್ಣಗೊಂಡ ಪ್ರತಿ ವಿದ್ಯಾಥರ್ಿಯು ಮತದಾರರ ಯಾದಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಆಯಾ ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಬೇಕೆಂದು ಗದಗ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ( ದಿ.2 ರಂದು) ಜರುಗಿದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಯುವ ಮತದಾರರಿಗಾಗಿ ಈಗಾಗಲೇ ಒಂದು ಸುತ್ತಿನ ಸ್ಪಧರ್ಾ ಚಟುವಟಿಕೆಗಳು ಪೂರ್ಣಗೊಂಡಿದ್ದು ಎರಡನೇ ಸುತ್ತಿನ ಸ್ಪಧರ್ಾ ಚಟುವಟಿಕೆಗಳನ್ನು ಜನೆವರಿ 8, ಮತ್ತು 9 ರಂದು ಜಿಲ್ಲೆಯ ಎಲ್ಲ ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಪ್ರಬಂಧ, ರಸಪ್ರಶ್ನೆ, ಭಾಷಣ ಸ್ಪಧರ್ೆಗಳನ್ನು ಆಯೋಜಿಸಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥರ್ಿಗಳು ಪಾಲ್ಗೊಂಡು ಯುವ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದರು. ಸುಮಾರು 80,000 ವಿದ್ಯಾಥರ್ಿಗಳು ಸ್ಪಧರ್ಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಸರ್ವ ಕ್ರಮ ಜರುಗಿಸಲು ತಿಳಿಸಿದರು.
ಇದೇ 25 ರಂದು ಜರುಗುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಅಂದು ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂದು ಬೆ. 11 ಗಂಟೆಗೆ ಪ್ರತಿಜ್ಞಾ ವಿಧಿ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸುವ ಮೂಲಕ ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಚರಿಸಲು ಸೂಚಿಸಿದ ಅವರು 18 ರಿಂದ 19 ವಯೋಮಾನದ ವಿದ್ಯಾಥರ್ಿಗಳು ಮತದಾರ ಪಟ್ಟಿಯಲ್ಲಿ ನೊಂದಣಿ ಮಾಡದೇ ಇರುವುದನ್ನು ಗಮನಿಸಿ ಅವರಿಂದ ನಮೂನೆ 6 ರಲ್ಲಿ ಅಜರ್ಿ ಸಂಗ್ರಹಿಸುವ ಕಾರ್ಯವನ್ನು ಪ್ರಾರಂಭಿಸಲು ಇದೇ 7 ರಿಂದ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಕ್ರಮ ಜರುಗಿಸಲು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಸಭೆಗೆ ತಿಳಿಸಿದರು.
ಜಿ.ಪಂ. ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ. ದಿನೇಶ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಬಿ.ಬಿ. ವಿಶ್ವನಾಥ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಜಿ.ಎಲ್. ಬಾರಾಟಕ್ಕೆ , ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.